ನ್ಯೂಸ್

ತಾರಕಕ್ಕೇರಿದೆ ಮತದಾರರ ಪಟ್ಟಿ ಅಕ್ರಮ ಪ್ರಕರಣ: ಬಿಜೆಪಿ, ಬಿಬಿಎಂಪಿ, ಚಿಲುಮೆ ಸಂಸ್ಥೆ ವಿರುದ್ಧ ಕಾಂಗ್ರೆಸ್​ ಪ್ರತಿಭಟನೆ

ಬೆಂಗಳೂರು: ವೋಟಿಂಗ್​ ಮಾಹಿತಿ ಕಳ್ಳತನದ ಫೈಟ್​ ತಾರಕಕ್ಕೇರಿದೆ. ಬಿಜೆಪಿ ಜತೆ ಬಿಬಿಎಂಪಿ ಅಧಿಕಾರಿಗಳೇ ಇದರಲ್ಲಿ ಶಾಮೀಲಾಗಿದ್ದಾರೆ. ಆಯುಕ್ತ ತುಷಾರ್​ ಗಿರಿನಾಥ್ ಅವರನ್ನು ವಜಾ ಮಾಡಬೇಕು ಎಂದು ಆಗ್ರಹಿಸಿ ಬಿಬಿಎಂಪಿ ಕಚೇರಿ ಎದುರು ಕಾಂಗ್ರೆಸ್​ ಕಾರ್ಯಕರ್ತರು ಇಂದು(ಶನಿವಾರ) ಬೆಳಗ್ಗೆ ಪ್ರತಿಭಟನೆ ನಡೆಸಿದ್ದಾರೆ. ಅತ್ತ ಕೇಂದ್ರ ಚುನಾವಣಾ ಆಯೋಗದ ಕಚೇರಿ ಬಳಿ ಡಿಕೆಶಿ ಮತ್ತು ಸಿದ್ದರಾಮಯ್ಯ ನೇತೃತ್ವದ ನಿಯೋಗವೂ ಪ್ರತಿಭಟನೆ ನಡೆಸಿದೆ.

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ನಡೆದಿದೆ. ಮತದಾರರ ಖಾಸಗಿ ಮಾಹಿತಿ ಕಳ್ಳತನವಾಗಿದೆ. ಸರ್ಕಾರದ ಗಮನಕ್ಕೆ ಬಂದೇ ಕಳ್ಳತನವಾಗಿದೆ. ಪ್ರಕರಣದ ಎಲ್ಲ ತಪ್ಪಿತಸ್ಥರನ್ನು ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾಗೆ ಡಿಕೆಶಿ ಮತ್ತು ಸಿದ್ದರಾಮಯ್ಯ ನೇತೃತ್ವದ ತಂಡ ದೂರು ನೀಡಿತು. ಬಳಿಕ ಚುನಾವಣಾ ಆಯೋಗದ ಕಚೇರಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಧರಣಿ ಆರಂಭಿಸಿದ್ದಾರೆ. ಮತದಾರರ ಡೇಟಾ ಸೋರಿಕೆ, ಮತ ಪಟ್ಟಿಯಿಂದ ಲಕ್ಷಾಂತರ ಮತದಾರರ ಹೆಸರು ಕೈಬಿಟ್ಟಿರುವ ಪ್ರಕರಣದಲ್ಲಿ ಚಿಲುಮೆ ಸಂಸ್ಥೆ, ಬಿಬಿಎಂಪಿ, ಬಿಜೆಪಿ ಇದೆ ಎಂದು ಆಕ್ರೋಶ ಹೊರಹಾಕಿದರು.