ನ್ಯೂಸ್

ಸ್ವಾತಂತ್ರ್ಯ ದಿನಾಚರಣೆ 2023: ದೆಹಲಿಯ ಈ ಪ್ರದೇಶಗಳಲ್ಲಿ 144 ಸೆಕ್ಷನ್ ಜಾರಿ

ನವ ದೆಹಲಿ: ಸ್ವಾತಂತ್ರ್ಯ ದಿನಾಚರಣೆಯ ಮುನ್ನ ದೆಹಲಿಯ ರಾಜ್‌ಘಾಟ್, ಐಟಿಒ ಮತ್ತು ಕೆಂಪು ಕೋಟೆಯ ಸಮೀಪವಿರುವ ಪ್ರದೇಶಗಳಲ್ಲಿ ಸೆಕ್ಷನ್ 144 ವಿಧಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುವುದು. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪು ಕೋಟೆಯಿಂದ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

"ಸ್ವಾತಂತ್ರ್ಯ ದಿನಾಚರಣೆಯ ದೃಷ್ಟಿಯಿಂದ, ರಾಜಾಬ್, ಐಟಿಒ, ಕೆಂಪು ಕೋಟೆ ಮುಂತಾದ ಸಮೀಪದ ಪ್ರದೇಶಗಳಲ್ಲಿ CrPC (ಅಪರಾಧ ಪ್ರಕ್ರಿಯಾ ಸಂಹಿತೆ) ಯ ಸೆಕ್ಷನ್ 144 ಅನ್ನು ಜಾರಿಗೊಳಿಸಲಾಗಿದೆ. ಈ ಪ್ರದೇಶಗಳಲ್ಲಿ ಯಾವುದೇ ರೀತಿಯ ಸಭೆಗಳಿಗೆ ಅನುಮತಿಸಲಾಗುವುದಿಲ್ಲ" ಎಂದು ಪೊಲೀಸರು ಟ್ವಿಟ್ಟರ್​​​​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರ

ಸ್ವಾತಂತ್ರ್ಯ ದಿನಾಚರಣೆಯ ಹಿನ್ನಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಲಾಲ್ ಚೌಕ್‌ನಲ್ಲಿರುವ ಘಂಟಾ ಘರ್‌ನಲ್ಲಿ ಭಾರತದ ರಾಷ್ಟ್ರಧ್ವಜ ಹಾರಾಡಲಿದೆ.

ಮಂಗಳವಾರ, ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಮಹತ್ವದ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಜಮ್ಮು ಕಾಶ್ಮೀರದಾದ್ಯಂತ ಮುಂಬರುವ ಸ್ವಾತಂತ್ರ್ಯ ದಿನಾಚರಣೆಯ ಸಿದ್ಧತೆಗಳನ್ನು ಪರಿಶೀಲಿಸಿದರು.