ಶಿವಮೊಗ್ಗ ಡಿಎಆರ್ ಸಭಾಭವನದಲ್ಲಿ ಪೊಲೀಸ್ ಭವನವನ್ನು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಉದ್ಘಾಟಿಸಿದರು. ಎಸ್.ಎನ್.ಚನ್ನಬಸಪ್ಪ, ಬಿ.ಕೆ ಸಂಗಮೇಶ್ವರ್, ಬೇಳೂರು ಗೋಪಾಲಕೃಷ್ಣ, ಮಂಜುನಾಥ ಭಂಡಾರಿ, ಬಲ್ಕೀಶ್ ಬಾನು ಇದ್ದರು. 
ನ್ಯೂಸ್

ಸುಸಜ್ಜಿತ ಪೊಲೀಸ್ ಭವನ ಉದ್ಘಾಟನೆ

ಶಿವಮೊಗ್ಗ: ಸಾಗರ ರಸ್ತೆಯಲ್ಲಿ ಬಹುಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಸುಸಜ್ಜಿತ ಪೊಲೀಸ್ ಭವನವನ್ನು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಉದ್ಘಾಟಿಸಿದರು.

ಡಿಎಆರ್ ಆವರಣದಲ್ಲಿ 3.75 ಕೋಟಿ ವೆಚ್ಚದಲ್ಲಿ ನಿರ್ಮಿತಿ ಕೇಂದ್ರದಿಂದ 500 ಆಸನಗಳ ಸಾಮರ್ಥ್ಯ, ಊಟದ ಹಾಲ್ ಸೇರಿ ಸುಸಜ್ಜಿತವಾಗಿ ಭವನ ನಿರ್ಮಿಸಲಾಗಿದೆ. ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಬಿ.ಕೆ ಸಂಗಮೇಶ್ವರ್, ಬೇಳೂರು ಗೋಪಾಲಕೃಷ್ಣ, ಎಂಎಲ್‌ಸಿಗಳಾದ ಮಂಜುನಾಥ ಭಂಡಾರಿ, ಡಿ.ಎಸ್.ಅರುಣ್, ಬಲ್ಕೀಶ್ ಬಾನು, ಡಾ. ಧನಂಜಯ ಸರ್ಜಿ, ಮಾಜಿ ಶಾಸಕ ಎಚ್.ಎಂ.ಚಂದ್ರಶೇಖರಪ್ಪ, ಸೂಡಾ ಅಧ್ಯಕ್ಷ ಎಚ್.ಎಸ್.ಸುಂದರೇಶ್, ಮುಖಂಡರಾದ ಎಚ್.ಸಿ.ಯೋಗೇಶ್ ಮತ್ತಿತರರು ಪಾಲ್ಗೊಂಡಿದ್ದರು.