ನ್ಯೂಸ್

ಟೆಕ್ಕಿ ಅತ್ಮಹತ್ಯೆಗೆ ಪ್ರಚೋದನೆ ದೃಢ: ಹೈಕೋರ್ಟ್ ಮೌಖಿಕ ಹೇಳಿಕೆ

ಬೆಂಗಳೂರು: ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಸಂಬಂಧ ದಾಖಲಿಸಿರುವ ದೂರು ಸಮರ್ಥನೀಯ ಎಂದಿರುವ ಹೈಕೋರ್ಟ್, ಎಫ್‌ಐಆರ್‌ನಲ್ಲಿ ಪ್ರಚೋದನೆಗೆ ನೀಡಿರುವ ಅಂಶಗಳು ಸ್ಪಷ್ಟವಾಗಿ ತಿಳಿದು ಬರುತ್ತದೆ ಎಂದು ಮೌಖಿಕವಾಗಿ ನುಡಿದಿದೆ.

ಪ್ರಕರಣ ಸಂಬಂಧ ತಮ್ಮ ವಿರುದ್ಧ ಮಾರತ್‌ಹಳ್ಳಿ ಪೊಲೀಸರು ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸಬೇಕು ಎಂದು ಕೋರಿ ನಿಖಿತಾ (ಪತ್ನಿ) ಹಾಗೂ ಮತ್ತಿತರರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಆರ್. ಕೃಷ್ಣ ಕುಮಾರ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಕಳೆದ ಶನಿವಾರ ವಿಚಾರಣಾಧೀನ ನ್ಯಾಯಾಲಯ ಮೂವರು ಆರೋಪಿಗಳಿಗೆ ಜಾಮೀನು ನೀಡಿದೆ. ಆತ್ಮಹತ್ಯೆ ಪ್ರಚೋದನೆಯಡಿ ಪ್ರಕರಣ ದಾಖಲಿಸಲು ಯಾವುದೇ ಅಂಶಗಳು ಇಲ್ಲ. ಆರೋಪಿಗಳನ್ನು ಬಂಧಿಸುವುದಕ್ಕೆ ಸೂಕ್ತ ಕಾರಣ ನೀಡುವಲ್ಲಿ ಪೊಲೀಸರು ವಿಲರಾಗಿದ್ದಾರೆ. ಹೀಗಾಗಿ, ಪ್ರಕರಣ ರದ್ದುಪಡಿಸಬೇಕು ಎಂದು ಮನವಿ ಮಾಡಿದರು.

ಈ ವೇಳೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಎಫ್‌ಐಆರ್ ಓದಿದರೆ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಸಂಗತಿ ಸ್ಪಷ್ಟವಾಗಿ ತಿಳಿದು ಬರುತ್ತದೆ. ನನ್ನ ಪ್ರಕಾರ ಎ್ಲ ವಿವರಗಳನ್ನು ನೀಡಲಾಗಿದೆ. ಎಫ್‌ಐಆರ್‌ನಲ್ಲಿ ಇದಕ್ಕಿಂತ ಇನ್ನೂ ಹೆಚ್ಚಿನದನ್ನು ಏನು ಕೊಡಲಾಗುತ್ತದೆ? ಎಂದು ಖಾರವಾಗಿಯೇ ಪ್ರಶ್ನಿಸಿತ್ತು.

ಸರ್ಕಾರದ ಪರ ವಕೀಲರನ್ನು ಉದ್ದೇಶಿಸಿ, ನ್ಯಾಯಪೀಠವು ಪ್ರಕರಣದ ತನಿಖೆ ಯಾವ ಹಂತದಲ್ಲಿದೆ? ಏನೆಲ್ಲ ದಾಖಲೆಗಳನ್ನು ಸಂಗ್ರಹಿಸಲಾಗಿದೆ? ಡೆತ್ ನೋಟ್, ಆತ್ಮಹತ್ಯೆ ವಿಡಿಯೋ ಸಂಗ್ರಹಿಸಲಾಗಿದೆಯೇ ಎಂದಿತು. ಇದಕ್ಕೆ ಸರ್ಕಾರದ ಪರ ವಕೀಲರು ತನಿಖೆ ಪ್ರಗತಿಯಲ್ಲಿದೆ ಎಂದರು. ಈ ವೇಳೆ ಪೀಠವು ತನಿಖೆ ಸಂದರ್ಭದಲ್ಲಿ ಸಂಗ್ರಹಿಸಿರುವ ದಾಖಲೆಗಳನ್ನು ಸಲ್ಲಿಸಬೇಕು. ಜತೆಗೆ ಆಕ್ಷೇಪಣೆ ಸಲ್ಲಿಸಬೇಕು ಎಂದು ನಿರ್ದೇಶಿಸಿ, ವಿಚಾರಣೆಯನ್ನು ಜ. 21ಕ್ಕೆ ಮುಂದೂಡಿದೆ.

ಮೊಮ್ಮಗನ ಸುಪರ್ದಿಗೆ ಸುಪ್ರೀಂ ಮೊರೆ

ಸೊಸೆ ನಿಕಿತಾ ಸಿಂಘಾನಿಯಾ ಜತೆಯಲ್ಲಿರುವ ಮೊಮ್ಮಗನನ್ನು ತಮ್ಮ ಸುಪರ್ದಿಗೆ ಒಪ್ಪಿಸುವಂತೆ ಕೋರಿ ಅತುಲ್ ಸುಭಾಷ್ ಅವರ ತಾಯಿ ಸುಪ್ರೀಂ ಕೊರ್ಟ್ ಮೊರೆ ಹೋಗಿದ್ದಾರೆ. ಡಿ.20ರಂದು ಅರ್ಜಿ ಆಲಿಸಿರುವ ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಎನ್. ಕೋಟೀಶ್ವರ್ ಸಿಂಗ್ ಅವರಿದ್ದ ಪೀಠ ಕರ್ನಾಟಕ, ಉತ್ತರ ಪ್ರದೇಶ ಹಾಗೂ ಹರಿಯಾಣ ಸರ್ಕಾರಗಳ ಪ್ರತಿಕ್ರಿಯೆ ಕೇಳಿದ್ದು, ಅಪ್ರಾಪ್ತ ಮಗುವಿನ ಸ್ಥಳ ಖಚಿತಪಡಿಸಿಕೊಳ್ಳುವಂತೆ ಸೂಚಿಸಿದೆ.