ಪ್ರಯಾಣಿಕರು ಮೂರು ಗಂಟೆ ಮುಂಚಿತವಾಗಿ ವಿಮಾನ ನಿಲ್ದಾಣ ತಲುಪಬೇಕು ಎಂದು ಆದೇಶ ಹೊರಡಿಸಲಾಗಿದೆ. ದೆಹಲಿ ವಿಮಾನ ನಿಲ್ದಾಣದಲ್ಲಿ ಸೈರನ್‌ಗಳನ್ನು ಸಹ ಅಳವಡಿಸಲಾಗಿದೆ. ಭದ್ರತಾ ಕಾರಣಗಳಿಂದಾಗಿ, ಪ್ರಯಾಣಿಕರು ಮೂರು ಗಂಟೆ ಮುಂಚಿತವಾಗಿ ವಿಮಾನ ನಿಲ್ದಾಣ ತಲುಪುವಂತೆ ಕೇಳಿಕೊಳ್ಳಲಾಗಿದೆ.
ದೆಹಲಿ| ಭಾರತದ ಮೇಲೆ ಪಾಕಿಸ್ತಾನದ ದಾಳಿ ಬಳಿಕ, ದೆಹಲಿಯ ಎನ್‌ಸಿಆರ್‌ನಲ್ಲಿ ತುರ್ತು ಪರಿಸ್ಥಿತಿಯನ್ನು ನಿಭಾಯಿಸಲು ಸಿದ್ಧತೆಗಳು ಪ್ರಾರಂಭವಾಗಿವೆ. ದೆಹಲಿ ಸರ್ಕಾರ ಸರ್ಕಾರಿ ನೌಕರರ ರಜೆಯನ್ನು ರದ್ದುಗೊಳಿಸಿದ್ದು, ದೆಹಲಿ ವಿಮಾನ ನಿಲ್ದಾಣದಿಂದ ಹೊರಡುವ ಮತ್ತು ಬರುವ ಸುಮಾರು ಹತ್ತಾರು ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದು ಹೇಳಲಾಗಿದೆ.
ಇದನ್ನೂ ಓದಿ: ಪಾಕಿಸ್ತಾನದ ವಿರುದ್ಧ S-400 ಕ್ಷಿಪಣಿ ಸಮರ; ಈ ವಾಯು ರಕ್ಷಣಾ ವ್ಯವಸ್ಥೆ ಬೇರೆ ದೇಶಗಳಲ್ಲೂ ಇದ್ಯಾ| S-400 Missile
ಹಲವು ಭಾರತೀಯ ವಿಮಾನಯಾನ ಸಂಸ್ಥೆಗಳು ಪ್ರಯಾಣ ಸಲಹೆಗಳನ್ನು ನೀಡಿದ್ದು, ಅದಕ್ಕೆ ಅನುಗುಣವಾಗಿ ಪ್ರಯಾಣಿಕರು ತಮ್ಮ ಪ್ರಯಾಣದ ಯೋಜನೆಯನ್ನು ಪ್ಲಾನ್ ಮಾಡಿಕೊಳ್ಳುವಂತೆ ತಿಳಿಸಿವೆ. ಇನ್ನೂ ದೇಶಾದ್ಯಂತ ರಾಷ್ಟ್ರೀಯ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಚಂಡೀಗಢ, ಶ್ರೀನಗರ, ಅಮೃತಸರ, ಲುಧಿಯಾನ, ಭುಂಟರ್, ಕಿಶೆನ್‌ಗಢ, ಪಟಿಯಾಲ, ಶಿಮ್ಯಾಕಾಂಗ್ರಾ-ಗಗ್ಗಲ್, ಭಟಿಂಡಾ,ಜೈಸಲ್ಮರ್, ಜೋಧಪುರ, ಬಿಕಾನೆರ್, ಹಲ್ವಾರಾ,ಪಠಾಣ್ ಕೋಟ್, ಜಮ್ಮು ಲೆಹ್, ಮುಂದ್ರಾ, ಜಾಮ್‌ನಗರ್, ಹಿರಾಸರ್ ಸೇರಿ ಇನ್ನೂ ಕೆಲ ವಿಮಾನ ನಿಲ್ದಾಣಗಳನ್ನು ಸ್ಥಗಿತಗೊಳಿಸಲಾಗಿದೆ.
ಇದನ್ನೂ ಓದಿ: ಪಾಕಿಸ್ತಾನದಿಂದ ಡ್ರೋನ್ ದಾಳಿ; ಕ್ಷಿಪಣಿಗಳನ್ನು ಹೊಡೆದುರುಳಿಸಿ ತಕ್ಕ ಉತ್ತರ ಕೊಟ್ಟ ಭಾರತೀಯ ಸೇನೆ| Drone attack
ರಾಜಧಾನಿಯಲ್ಲಿ ಭದ್ರತೆಗಾಗಿ ಪೊಲೀಸರೊಂದಿಗೆ ಅರೆಸೈನಿಕ ಪಡೆಗಳನ್ನು ನಿಯೋಜಿಸಲಾಗಿದೆ. ಗಾಜಿಯಾಬಾದ್‌ನ ಹಿಂಡನ್ ವಿಮಾನ ನಿಲ್ದಾಣದಲ್ಲಿ ಎಚ್ಚರಿಕೆ ನೀಡಲಾಗಿದೆ. ಎಲ್ಲಾ 11 ಜಿಲ್ಲೆಗಳಲ್ಲಿ ಜಾಗರೂಕರಾಗಿರಲು ತ್ವರಿತ ಪ್ರತಿಕ್ರಿಯೆ ತಂಡಗಳಿಗೆ ಸೂಚನೆ ನೀಡಲಾಗಿದೆ. ರಾಜಧಾನಿಯ ಸೂಕ್ಷ್ಮ ಪ್ರದೇಶಗಳಲ್ಲಿ ಸೈರನ್‌ಗಳನ್ನು ಅಳವಡಿಸಲಾಗುತ್ತಿದೆ.
ದೇಶದ ರಾಜಧಾನಿ ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದಿನಂತೆ ಕಾರ್ಯನಿರ್ವಹಿಸುತ್ತಿದ್ದು, ಭದ್ರತೆ ಹೆಚ್ಚಿಸಿರುವ ಕಾರಣ ಕೆಲವು ವಿಮಾನಗಳ ಹಾರಾಟಗಳು ರದ್ದಾಗಿವೆ. ಪ್ರಯಾಣಿಕರು ತಮ್ಮ ವಿಮಾನಯಾನದ ಬಗ್ಗೆ ಮಾಹಿತಿ ತಿಳಿದುಕೊಂಡು ಏರ್‌ಪೋರ್ಟ್‌ಗೆ ಬರಲು ಸೂಚಿಸಲಾಗಿದೆ.
(ಏಜೆನ್ಸೀಸ್)