ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಗೋಹತ್ಯೆಗಳ ಹಿಂದೆ ಬೇರೆ ರೀತಿಯ ಪ್ರಚೋದನೆ ಇದೆಯೇ ಎಂಬ ಬಗ್ಗೆ ತನಿಖೆ ನಡೆಸಲು ಪೊಲೀಸರಿಗೆ ಸೂಚಿಸಿರುವುದಾಗಿ(increasing cow slaughter; instructed the police to investigate) ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ(G. Parameswar) ಹೇಳಿದರು.
ಸದಾಶಿವನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಡೆಯುತ್ತಿರುವ ಗೋಹತ್ಯೆ ಪ್ರಕರಣಗಳಿಗೆ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ. ಈ ಘಟನೆಗಳನ್ನು ಗಂಭೀರವಾಗಿ ತೆಗೆದುಕೊಳ್ಳುವಂತೆ ಪೊಲೀಸರಿಗೆ ಮತ್ತೊಮ್ಮೆ ಸೂಚನೆ ನೀಡಿದ್ದೇನೆ.
ಈ ರೀತಿಯ ಮನಸ್ಥಿತಿ ಇರುವವರನ್ನು ಮೊದಲು ಗುರುತಿಸಬೇಕು. ಕೃತ್ಯದ ಹಿಂದೆ ಬೇರೆ ಯಾರಾದ್ದಾದರೂ ಪ್ರಚೋದನೆ ಇದೆಯೇ?, ವೈಯಕ್ತಿಕವಾಗಿ ಕೃತ್ಯ ಎಸಗುತ್ತಿದ್ದಾರೆಯೇ ಅಥವಾ ಸಂಘಟನೆಗಳಿವೆಯೇ ಎಂಬೆಲ್ಲ ವಿಚಾರಗಳನ್ನು ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.
ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹವನ್ನು ವಿಭಾಗಿಸುವ ಯಾವುದೇ ಪ್ರಸ್ತಾವನೆಗಳು ಸದ್ಯಕ್ಕೆ ಸರ್ಕಾರದ ಮುಂದಿಲ್ಲ ಎಂದು ಹೇಳಿದರು.
ಬೀದರ್‌ನಲ್ಲಿ ಎಟಿಎಂ ವಾಹನದ ಮೇಲೆ ದಾಳಿ ನಡೆಸಿ ಒಬ್ಬರನ್ನು ಹತ್ಯೆಗೈದು, ಮತ್ತೊಬ್ಬರನ್ನು ಗಾಯಗೊಳಿಸಿ 83 ಲಕ್ಷ ದರೋಡೆ ಮಾಡಿದ ಪ್ರಕರಣದಲ್ಲಿ ಮಾಹಿತಿ ಕಲೆಹಾಕಲಾಗಿದೆ. ಶೀಘ್ರವಾಗಿ ಆರೋಪಿಗಳನ್ನು ಬಂಧಿಸಲಾಗುವುದು. ಮಂಗಳೂರಿನ ಬ್ಯಾಂಕ್ ದರೋಡೆಯಲ್ಲಿ 2 ಕಾರುಗಳನ್ನು ಬಳಸಿರುವುದು ಸೇರಿದಂತೆ ಇತರ ಮಾಹಿತಿಗಳು ದೊರೆತಿವೆ. ಈ ಎರಡೂ ಘಟನೆಗಳಿಗೆ ತಂಡವನ್ನು ರಚನೆ ಮಾಡಿ ಆರೋಪಿಗಳ ಹುಡುಕಾಟದಲ್ಲಿ ತೊಡಗಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕಿರು ಸಾಲ ನೀಡಿ ಅದರ ವಸೂಲಿಗೆ ಕಿರುಕುಳ ನೀಡುತ್ತಿರುವವರಿಗೆ ಕಡಿವಾಣ ಹಾಕಲು ಪ್ರತ್ಯೆಕ ಆರ್ಥಿಕ ಇಲಾಖೆ ಜವಾಬ್ದಾರಿ ನಾವು ಮಾಡಲು ಬರುವುದಿಲ್ಲ ಎಂದರು.
ಸಭಾಪತಿ ಹೊರಟ್ಟಿ ಬದಲಾವಣೆ ವಿಚಾರ ಕುರಿತ ಪ್ರಶ್ನೆಗೆ, ಯಾವ ಹಂತದಲ್ಲಿ ಚರ್ಚೆಯಾಗಿದೆ ಗೊತ್ತಿಲ್ಲ. ಬಿಜೆಪಿ ನಮಗೆ ಒಡೆದ ಮನೆ ಅಂತಿದ್ದರು. ಅವರ ಮನೆಗೆ ಎಷ್ಟು ಬಾಗಿಲು ಹೇಳಬೇಕಲ್ಲವೆ? ಎಂದು ಕೆಣಕಿದರು.
ಸುರ್ಜೇವಾಲಾ ವಿರುದ್ಧ ಹೈಕಮಾಂಡ್‌ಗೆ ದೂರು ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ ಎಂದು ಡಾ.ಪರಮೇಶ್ವರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.