ನ್ಯೂಸ್

Asia Game; 41 ವರ್ಷಗಳ ಬಳಿಕ ಚಿನ್ನದ ಪದಕಕ್ಕೆ ಮುತ್ತಿಟ್ಟ ಭಾರತ ಕುದುರೆ ಸವಾರಿ ತಂಡ

ನವದೆಹಲಿ: ಏಷ್ಯನ್ ಗೇಮ್ಸ್ 2023 ಕ್ರೀಡಾಕೂಟದಲ್ಲಿ ಈಕ್ವೇಸ್ಟ್ರಿಯನ್ ಅಥವಾ ಕುದುರೆ ಸವಾರಿಯಲ್ಲಿ ಬರೋಬ್ಬರಿ 41 ವರ್ಷಗಳ ಬಳಿಕ ಭಾರತ ತಂಡಕ್ಕೆ ಚಿನ್ನದ ಪದಕ ಲಭಿಸಿದೆ.

ಟೀಮ್ ಡ್ರೆಸ್ಸೇಜ್ ಈವೆಂಟ್‌ನಲ್ಲಿ ಭಾರತ ತಂಡವು ಒಟ್ಟು 209.205 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಚೀನಾ 204.882 ರೊಂದಿಗೆ ಬೆಳ್ಳಿಯೊಂದಿಗೆ ಮತ್ತು ಹಾಂಗ್ ಕಾಂಗ್ ಚೀನಾ 204.852 ರೊಂದಿಗೆ 3ನೇ ಸ್ಥಾನದಲ್ಲಿ ಕಂಚಿನ ಪದಕ ಪಡೆದುಕೊಂಡಿದೆ. ಡ್ರೆಸ್ಸೇಜ್ ಟೀಮ್ ಈವೆಂಟ್‌ನಲ್ಲಿ ತಂಡದ ಒಟ್ಟಾರೆ ಸ್ಕೋರ್‌ಗೆ ಅಗ್ರ 3 ತಂಡಗಳ ಸ್ಕೋರ್ ಅನ್ನು ಮಾತ್ರ ಪರಿಗಣಿಸಲಾಗುತ್ತದೆ.

ಬರೊಬ್ಬರಿ 41 ವರ್ಷಗಳ ಬಳಿಕ ಭಾರತ ಕುದುರೆ ಸವಾರಿ ತಂಡ ಚಿನ್ನದ ಪದಕಕ್ಕೆ ಮುತ್ತಿಟ್ಟಿದೆ. ಈ ಕ್ರೀಡೆಯಲ್ಲಿ 1982 ರ ಬಳಿಕ ಭಾರತಕ್ಕೆ ಸಿಕ್ಕ ಮೊದಲ ಚಿನ್ನದ ಪದಕ ಇದಾಗಿದೆ.

ಭಾರತ ತಂಡದ ಆಟಗಾರರು: ಸುದೀಪ್ತಿ ಹಜೇಲಾ, ಹೃದಯ್ ವಿಪುಲ್ ಛೇಡಾ, ಅನುಷ್ ಗರ್ವಾಲಾ ಮತ್ತು ದಿವ್ಯಕೃತಿ ಸಿಂಗ್ ಅವರ ಭಾರತ ತಂಡವು ಕುದುರೆ ಸವಾರಿಯಲ್ಲಿ ಡ್ರೆಸ್ಸೇಜ್ ಸ್ಪರ್ಧೆಯಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕವನ್ನು ಗೆಲ್ಲುವ ಮೂಲಕ ಇತಿಹಾಸವನ್ನು ಬರೆದಿದೆ.