ನವದೆಹಲಿ: ಕಳೆದ 10 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತವು ಅದ್ಭುತವಾಗಿ ಮುಂದುವರಿದಿದೆ. ಮೂಲಸೌಕರ್ಯಗಳಾದ ವಿಮಾನ ನಿಲ್ದಾಣಗಳು, ರಸ್ತೆಗಳು, ರೈಲುಗಳು ಮತ್ತು ಸಮುದ್ರಮಾರ್ಗಗಳಲ್ಲಿ ಅಭೂತಪೂರ್ವ ಅಭಿವೃದ್ಧಿಯನ್ನು ಕಂಡಿದೆ ಎಂದು ಭೂತಾನ್ ಪ್ರಧಾನಿ ತ್ಶೆರಿಂಗ್ ತೊಬ್ಗೇ ಹೇಳಿದರು.
ಎಎನ್‌ಐ ಜತೆ ಮಾತನಾಡಿದ ತೊಬ್ಗೇ ಅವರು ವಿದೇಶಾಂಗ ನೀತಿಯನ್ನು ಪ್ರಧಾನಿ ಮೋದಿಯವರ ನಾಯಕತ್ವದ ದೊಡ್ಡ ಸಾಧನೆಗಳಲ್ಲಿ ಒಂದೆಂದು ಹೇಳಿದರು. ನಿಯೋಜಿತ ಪ್ರಧಾನಿ ಮೋದಿಯವರ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಬಂದಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ನರೇಂದ್ರ ಮೋದಿ ಅವರು ಐತಿಹಾಸಿಕ ಮೂರನೇ ಬಾರಿಗೆ ಭಾರತದ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಬಹುನಿರೀಕ್ಷಿತ ಸಮಾರಂಭದಲ್ಲಿ ಭಾಗವಹಿಸಲು ಸಜ್ಜಾಗಿರುವ ಗಣ್ಯ ಅತಿಥಿಗಳಲ್ಲಿ ಪಿಎಂ ತೊಬ್ಗೇ ಕೂಡ ಸೇರಿದ್ದಾರೆ.
ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್‌ಡಿಎ) ಜನರ ವಿಶ್ವಾಸ ಮತ್ತು ನಂಬಿಕೆಯನ್ನು ಆನಂದಿಸುತ್ತಿದೆ. ಇದು ಅವರ ಕಾರ್ಯಕ್ಷಮತೆಯನ್ನು ಪ್ರತಿಬಿಂಬಿಸುತ್ತದೆ ಎಂದರು. (ಏಜೆನ್ಸೀಸ್)