ಕೊಡಗು: ಬಹಳ ಜನ ಬಹುತ್ವದ ಭಾರತವನ್ನು ಒಂದು ಧರ್ಮದ ರಾಷ್ಟ ಎನ್ನುತ್ತಾರೆ. ಭಾರತ ಜಾತ್ಯತೀತ, ಪ್ರಜಾಪ್ರಭುತ್ವವಾದಿ ಬಹುತ್ವದ ರಾಷ್ಟ್ರ. ಇದನ್ನು ಒಂದು ಧರ್ಮಕ್ಕೆ ಸೇರಿದ ಸಾರ್ವಭೌಮ ರಾಷ್ಟವನ್ನಾಗಿ ಮಾಡಲು ಆಗುವುದಿಲ್ಲ ಎಂದು ಮುಖ್ಯಮಂತ್ರಿ( CM) ಸಿದ್ದರಾಮಯ್ಯ ಪ್ರತಿಪಾದಿಸಿದರು.
ಭಾಗಮಂಡಲದ ಹತ್ತಿರ ಮಡಿಕೇರಿ ಮತ್ತು ತಲಕಾವೇರಿ ಮತ್ತು ನಾಪೋಕ್ಲು –ತಲಕಾವೇರಿ ರಸ್ತೆಗಳ ಛೇದಕದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಮೇಲು ಸೇತುವೆಯನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು.
ಇದನ್ನೂ ಓದಿ:ಠಾಣೆಯಲ್ಲೇ ಸರ್ವಿಸ್ ರಿವಲ್ವರ್ನಿಂದ ಆತ್ಮಹತ್ಯೆ ಮಾಡಿಕೊಂಡ ಸಬ್ಇನ್ಸ್ಪೆಕ್ಟರ್!: ಕಾರಣ ಹೀಗಿದೆ..| Revolver
ಎಲ್ಲಾ ಧರ್ಮಗಳು, ಜನರು, ಜಾತಿಗಳೂ ಕೂಡ ಸಮಾನ. ಅದಕ್ಕಾಗಿಯೇ ಸಂವಿಧಾನದಲ್ಲಿ ಸಹಿಷ್ಣುತೆ ಹಾಗೂ ಸಹಬಾಳ್ವೆ ಇರಬೇಕು ಎಂದಿರುವುದು. ನಮ್ಮ ಧರ್ಮವನ್ನು ಪ್ರೀತಿಸಿ ಗೌರವಿಸಬೇಕು. ಆದರೆ ಇನ್ನೊಂದು ಧರ್ಮವನ್ನು ಅಲ್ಲಗಳೆಯಬಾರದು. ಅದನ್ನೇ ಸಹಿಷ್ಣುತೆ ಎನ್ನುತ್ತಾರೆ. ಸಹಿಸ್ಣುತೆ ಇದ್ದಾಗ ಮಾತ್ರ ನಾವು ಮಾನವರಾಗಿ ಬಾಳಲು ಸಾಧ್ಯವಾಗುತ್ತದೆ. ಕುವೆಂಪು ಅವರು ಹುಟ್ಟುವಾಗ ಎಲ್ಲರೂ ವಿಶ್ವ ಮಾನವರಾಗಿರುತ್ತಾರೆ, ಬೆಳೆಯುತ್ತಾ ಅಲ್ಪಮಾನವರಾಗುತ್ತಾರೆ ಎಂದು ಹೇಳಿದ್ದರು. ನಾವೆಲ್ಲರೂ ವಿಶ್ವಮಾನವರಾಗುವ ಪ್ರಯತ್ನ ಮಾಡಬೇಕು ಎಂದು ಸಿಎಂ ತಿಳಿಸಿದರು.
ಸಿ ಅಂಡ್ ಡಿ ಭೂಮಿಗೆ ಸಂಬಂಧಿಸಿದಂತೆ ಸಮಿತಿಯನ್ನು ರಚಿಸಿ, ಅದರ ವರದಿಯಂತೆ ಸರ್ಕಾರ ಕ್ರಮ ಕೈಗೊಳ್ಳಲಿದೆ. ಆದ್ದರಿಂದ ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದರು.
ಇದನ್ನೂ ಓದಿ:ಮತದಾನದ ಪ್ರಾಮುಖ್ಯದ ಅರಿವು: ಡಾ.ಶಲೀಪ್ ಎ.ಪಿ. ಸಲಹೆ
ಈ ಭಾಗದ ಜನರು ಮೈಕ್ರೋಫೈನಾನ್ಸ್ ನಿಂದ ಅನುಭವಿಸುತ್ತಿರುವ ಕಿರುಕುಳವನ್ನು ತಪ್ಪಿಸಲು ಹಾಗೂ ಮೈಕ್ರೋಫೈನಾನ್ಸ್ ಸಂಸ್ಥೆಗಳ ನಿಯಂತ್ರಣಕ್ಕಾಗಿ ಸುಗ್ರೀವಾಜ್ಞೆಯನ್ನು ಸಧ್ಯದಲ್ಲಿಯೇ ಜಾರಿಗೊಳಿಸಲಾಗುವುದು ಎಂದರು.