Narendra Modi: ಭಾರತವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗುವ ಹಾದಿಯಲ್ಲಿದ್ದು, ದೇಶದ ಜನರು ನಮ್ಮಲ್ಲಿಯೇ ತಯಾರಿಸಿದ ವಸ್ತುಗಳನ್ನು ಮಾತ್ರ ಖರೀದಿಸುವ ಮೂಲಕ ಸ್ಥಳೀಯರಿಗೆ ಧ್ವನಿಯಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಇದನ್ನೂ ಓದಿ:ಗ್ರಾಮೀಣ ಭಾಗದಲ್ಲಿ ಜಾನಪದ ಸಂಸ್ಕೃತಿ ಜೀವಂತ
ವಾರಣಾಸಿಯಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ, ಜಾಗತಿಕ ಅಸ್ಥಿರತೆಯ ವಾತಾವರಣ ಉಲ್ಲೇಖಿಸುತ್ತಾ, ದೇಶದ ಹಿತಾಸಕ್ತಿಗಳನ್ನು ಪೂರೈಸಲು ಸರ್ಕಾರ ಅಗತ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತದೆ. ಭಾರತ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಮತ್ತು ಅದಕ್ಕಾಗಿಯೇ ತನ್ನ ಆರ್ಥಿಕ ಹಿತಾಸಕ್ತಿಗಳಿಗೆ ಸಂಬಂಧಿಸಿದಂತೆ ಜಾಗರೂಕರಾಗಿರಬೇಕು ಎಂದು ತಿಳಿಸಿದರು.
ನಮ್ಮ ಸರ್ಕಾರ ದೇಶದ ಹಿತದೃಷ್ಟಿಯಿಂದ ಸಾಧ್ಯವಿರುವ ಎಲ್ಲವನ್ನೂ ಮಾಡುತ್ತಿದೆ. ರೈತರು, ಸಣ್ಣ ಕೈಗಾರಿಕೆಗಳು, ಯುವಕರಿಗೆ ಉದ್ಯೋಗದಂತಹ ವಿಷಯದಲ್ಲಿ ರಾಜಿ ಇಲ್ಲ, ಸರ್ಕಾರ ಈ ದಿಕ್ಕಿನಲ್ಲಿ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ, ದೇಶಕ್ಕೆ ಒಳಿತನ್ನು ಬಯಸುವವರು ಮತ್ತು ಭಾರತವನ್ನು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಿ ನೋಡಲು ಇಚ್ಛೆ ಹೊಂದಿರುವವರು ಪಕ್ಷಾತೀತವಾಗಿ ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು 'ಸ್ವದೇಶಿ' ಉತ್ಪನ್ನಗಳ ಕುರಿತು ನಿರ್ಣಯ ತೆಗೆದುಕೊಳ್ಳಲು ಸಲಹೆ ನೀಡಿದರು. (ಏಜೆನ್ಸೀಸ್)