India-Pak Ceasefire:ಭಾರತ ಮತ್ತು ಪಾಕಿಸ್ತಾನಗಳು ಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ಹೇಳಿದ್ದಾರೆ.
"ಅಮೆರಿಕದ ಮಧ್ಯಸ್ಥಿಕೆಯಲ್ಲಿ ರಾತ್ರಿಯಿಡೀ ನಡೆದ ಸುದೀರ್ಘ ಮಾತುಕತೆಯ ನಂತರ, ಭಾರತ ಮತ್ತು ಪಾಕಿಸ್ತಾನಗಳು ಸಂಪೂರ್ಣ ಮತ್ತು ತಕ್ಷಣದ ಒಪ್ಪಂದಕ್ಕೆ ಒಪ್ಪಿಕೊಂಡಿವೆ ಎಂದು ಘೋಷಿಸಲು ನನಗೆ ಸಂತೋಷವಾಗಿದೆ. ಸಾಮಾನ್ಯ ಜ್ಞಾನ ಮತ್ತು ಉತ್ತಮ ಬುದ್ಧಿಮತ್ತೆಯನ್ನು ಬಳಸಿದ್ದಕ್ಕಾಗಿ ಎರಡೂ ದೇಶಗಳಿಗೆ ಅಭಿನಂದನೆಗಳು. ಈ ವಿಷಯದ ಬಗ್ಗೆ ನಿಮ್ಮ ಗಮನಕ್ಕೆ ಧನ್ಯವಾದಗಳು!" ಎಂದು ಟ್ರಂಪ್ ಟ್ರುತ್ ಸೋಶಿಯಲ್ ಮೀಡಿಯಾ ವೇದಿಕೆಯಲ್ಲಿ ಪೋಸ್ಟ್ ಮಾಡಿದ್ದಾರೆ.
"ಕಳೆದ 48 ಗಂಟೆಗಳಲ್ಲಿ, ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಮತ್ತು ನಾನು ಪ್ರಧಾನಿ ನರೇಂದ್ರ ಮೋದಿ ಮತ್ತು ಶೆಹಬಾಜ್ ಷರೀಫ್, ವಿದೇಶಾಂಗ ಸಚಿವ ಸುಬ್ರಹ್ಮಣ್ಯಂ ಜೈಶಂಕರ್, ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರರಾದ ಅಜಿತ್ ದೋವಲ್ ಮತ್ತು ಅಸಿಮ್ ಮಲಿಕ್ ಸೇರಿದಂತೆ ಹಿರಿಯ ಭಾರತೀಯ ಮತ್ತು ಪಾಕಿಸ್ತಾನಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದೇವೆ. ಭಾರತ ಮತ್ತು ಪಾಕಿಸ್ತಾನ ಸರ್ಕಾರಗಳು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಮತ್ತು ತಟಸ್ಥ ಸ್ಥಳದಲ್ಲಿ ವ್ಯಾಪಕವಾದ ವಿಷಯಗಳ ಕುರಿತು ಮಾತುಕತೆಗಳನ್ನು ಪ್ರಾರಂಭಿಸಲು ಒಪ್ಪಿಕೊಂಡಿವೆ ಎಂದು ಘೋಷಿಸಲು ನನಗೆ ಸಂತೋಷವಾಗಿದೆ" ಎಂದು ರೂಬಿಪ್ X ನಲ್ಲಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ:ಭಾರತ- ಪಾಕ್ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ: ಡೊನಾಲ್ಡ್ ಟ್ರಂಪ್ ಮಹತ್ವದ ಘೋಷಣೆ | India-Pak Ceasefire
ಈ ಕುರಿತು ಟ್ರಂಪ್ ಹೇಳಿದ್ದಾರೆಯೇ ಹೊರತು ಭಾರತ ಮತ್ತು ಪಾಕಿಸ್ತಾನದಿಂದ ಯುದ್ದ ವಿರಾಮದ ಬಗ್ಗೆ ಅಧಿಕೃತವಾಗಿ ಹೇಳಿಕೆಯಾಗಲಿ ಅಥವಾ ಮಾಹಿತಿ ಪ್ರಕಟವಾಗಿಲ್ಲ.
"ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು (ಡಿಜಿಎಂಒ) ಇಂದು ಮಧ್ಯಾಹ್ನ 3:35 ಕ್ಕೆ ಭಾರತೀಯ ಡಿಜಿಎಂಒಗೆ ಕರೆ ಮಾಡಿದ್ದರು. ಭಾರತೀಯ ಸಮಯ 17:00(5 ಗಂಟೆ) ಗಂಟೆಯಿಂದ ಜಾರಿಗೆ ಬರುವಂತೆ ಭೂಮಿ ಮತ್ತು ಗಾಳಿ ಮತ್ತು ಸಮುದ್ರದಲ್ಲಿ ಎಲ್ಲಾ ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸಲು ಅವರ ನಡುವೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಇದನ್ನು ಜಾರಿಗೆ ತರಲು ಎರಡೂ ಕಡೆಯಿಂದ ಸೂಚನೆಗಳನ್ನು ನೀಡಲಾಗಿದೆ. ಭಾರತೀಯ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು ಮೇ.12 ರಂದು ಮಧ್ಯಾಹ್ನ 12 ಗಂಟೆಗೆ ಮಾತನಾಡಲಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಹೇಳಿದ್ದಾರೆ.