ರಾಣೆಬೆನ್ನೂರ: ಇಲ್ಲಿಯ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ನ ತಾಲೂಕು ಟಕ, ಕದಳಿ ಮಹಿಳಾ ವೇದಿಕೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ನ ವತಿಯಿಂದ ಆ. 30ರಂದು ಬೆಳಗ್ಗೆ 11ಗಂಟೆಗೆ ನಗರದ ಎಪಿಎಂಸಿ ರಸ್ತೆಯ ನಾಗಶಾಂತಿ ಉನ್ನತಿ ಪದವಿ ಪೂರ್ವ ಕಾಲೇಜಿನಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ನ ಸಂಸ್ಥಾಪನಾ ದಿನ ಆಚರಿಸಲಾಗುವುದು.
ಪರಿಷತ್ನ ತಾಲೂಕು ಅಧ್ಯೆ ರಾಜೇಶ್ವರಿ ಪಾಟೀಲ ಅಧ್ಯಕ್ಷತೆ ವಹಿಸುವರು.
ಎಸ್.ಜೆ.ಎಮ್.ವಿ., ಬಿ.ಎ.ಜೆ.ಎಸ್.ಎಸ್. ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಆರ್.ವಿ. ಹೆಗಡಾಳ, ಶರಣ ಸಾಹಿತ್ಯ ಪರಿಷತ್ನ ಉಪಾಧ್ಯ ಎಸ್.ಕೆ. ನೆಸ್ವಿ, ಕದಳಿ ಮಹಿಳಾ ವೇದಿಕೆ ಅಧ್ಯೆ ಗಾಯತ್ರಿ ಕುರವತ್ತಿ, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಪ್ರಭಾಕರ ಶಿಗ್ಲಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.