ನ್ಯೂಸ್

ಶೇ.25 ರಷ್ಟು ಹೆಚ್ಚುವರಿ ಸುಂಕ ಹೇರಿಕೆ; ಡೊನಾಲ್ಡ್​​ ಟ್ರಂಪ್​ಗೆ ಬಲವಾಗಿ ಪ್ರತಿಕ್ರಿಯಿಸಿದ ಭಾರತ!| Tariff

Tariff : ರಷ್ಯಾದ ತೈಲ ಆಮದಿನ ಹಿನ್ನೆಲೆ ಭಾರತದ ಮೇಲೆ ಮತ್ತೆ ಶೇ.25 ರಷ್ಟು ಸುಂಕ ವಿಧಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿರ್ಧರಿಸಿದ ನಂತರ, ತನ್ನ ರಾಷ್ಟ್ರೀಯ ಹಿತಾಸಕ್ತಿಗಳ ಮೇಲೆ ದೃಢವಾಗಿ ನಿಂತಿದೆ ಎಂದು ಭಾರತ ಸ್ಪಷ್ಟಪಡಿಸಿದೆ.

ಹೆಚ್ಚುವರಿ ಸುಂಕವು "ಅನ್ಯಾಯ, ನ್ಯಾಯಸಮ್ಮತವಲ್ಲ ಮತ್ತು ಅಸಮಂಜಸ. ಅಲ್ಲದೆ, ರಾಷ್ಟ್ರೀಯ ಹಿತಾಸಕ್ತಿಗಳನ್ನು ರಕ್ಷಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತದೆ" ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.

"ನಮ್ಮ ಆಮದುಗಳು ಮಾರುಕಟ್ಟೆ ಅಂಶಗಳನ್ನು ಆಧರಿಸಿವೆ ಮತ್ತು ಭಾರತದ 1.4 ಶತಕೋಟಿ ಜನರ ಇಂಧನ ಸುರಕ್ಷತೆಯನ್ನು ಖಾತರಿಪಡಿಸುವ ಒಟ್ಟಾರೆ ಉದ್ದೇಶದಿಂದ ಮಾಡಲ್ಪಟ್ಟಿವೆ ಎಂಬ ಅಂಶವೂ ಸೇರಿದಂತೆ ಈ ವಿಷಯಗಳ ಬಗ್ಗೆ ನಮ್ಮ ನಿಲುವನ್ನು ನಾವು ಈಗಾಗಲೇ ಸ್ಪಷ್ಟಪಡಿಸಿದ್ದೇವೆ. ಆದ್ದರಿಂದ ಹಲವಾರು ಇತರ ದೇಶಗಳು ತಮ್ಮ ರಾಷ್ಟ್ರೀಯ ಹಿತಾಸಕ್ತಿಯಲ್ಲಿ ತೆಗೆದುಕೊಳ್ಳುತ್ತಿರುವ ಕ್ರಮಗಳಿಗಾಗಿ ಭಾರತದ ಮೇಲೆ ಹೆಚ್ಚುವರಿ ಸುಂಕಗಳನ್ನು ವಿಧಿಸಲು ಅಮೆರಿಕ ಆಯ್ಕೆ ಮಾಡಿಕೊಂಡಿರುವುದು ಅತ್ಯಂತ ದುರದೃಷ್ಟಕರ" ಎಂದು ಸಚಿವಾಲಯ ಹೇಳಿದೆ.

ಈ ಕ್ರಮಗಳು ಅನ್ಯಾಯ, ನ್ಯಾಯಸಮ್ಮತವಲ್ಲ ಮತ್ತು ಅಸಮಂಜಸವೆಂದು ನಾವು ಪುನರುಚ್ಚರಿಸುತ್ತೇವೆ. ಭಾರತವು ತನ್ನ ರಾಷ್ಟ್ರೀಯ ಹಿತಾಸಕ್ತಿಗಳನ್ನು ರಕ್ಷಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಹೇಳಿಕೆಯಲ್ಲಿ ಸ್ಪಷ್ಟಪಡಿಸಲಾಗಿದೆ.(ಏಜೆನ್ಸೀಸ್​)