ನ್ಯೂಸ್

ಇಂಡಿಯಾ ಒಕ್ಕೂಟ ಛಿದ್ರ: ಬೊಮ್ಮಾಯಿ ಭವಿಷ್ಯ

Bengaluru - Political - Shivananda Tagadur

ಬೆಂಗಳೂರು:
ಕಾಂಗ್ರೆಸ್ ವರ್ತನೆಯಿಂದ ಬೇಸತ್ತು ಇಂಡಿಯಾ ಒಕ್ಕೂಟದ ಪಕ್ಷಗಳು ದೂರವಾಗುತ್ತಿದ್ದು, ಶೀಘ್ರವೇ ಒಕ್ಕೂಟ ಛಿದ್ರವಾಗಲಿದೆ ಎಂದುಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ,
ಒಕ್ಕೂಟದಿಂದ ಮಮತಾ ಬ್ಯಾನರ್ಜಿ ಹೊರಗೆ ಹೋಗಿದ್ದಾರೆ. ಶರದ್ ಪವಾರ್, ನಿತೀಶ್ ಕುಮಾರ್ ಕೂಡ ಒಂದು ಹೆಜ್ಜೆ ಹೊರಗಿಟ್ಟಿದ್ದಾರೆ. ಮೋದಿ 3ನೇ ಬಾರಿಗೆ ಪ್ರಧಾನಿಯಾದ ಮೇಲೆ ಒಕ್ಕೂಟವೇ ಇರುವುದಿಲ್ಲ ಎಂದರು.

ಹೈಕಮಾಂಡ್ ನಿರ್ಧಾರಕ್ಕೆ ಬದ್ದ
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಜನಸಂಘದಿಂದ ಇದ್ದವರು, ಅವರಿಗೆ ಕಾಂಗ್ರೆಸ್‌ನಲ್ಲಿ ಇರಲು ಕಷ್ಟವಾಗಲಿದೆ. ಅವರನ್ನು ಪಕ್ಷಕ್ಕೆ ಕರೆತರಲು ಯಾರ ಮೂಲಕ ಪ್ರಯತ್ನ ನಡೆಸಲಾಗುತ್ತಿದೆ ಎನ್ನುವುದು ನನಗೆ ಗೊತ್ತಿಲ್ಲ. ಅವರ ವಿಚಾರದಲ್ಲಿ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವೆಲ್ಲರೂ ಬದ್ದರಾಗಿರುತ್ತೇವೆ ಎಂದರು.

ಕಾಂಗ್ರೆಸ್ ಗುತ್ತಿಗೆಯಲ್ಲ
ದಲಿತರು ಮತ್ತು ಒಬಿಸಿ ಕಾಂಗ್ರೆಸ್‌ನ ಗುತ್ತಿಗೆಯಲ್ಲ. ಅಂಬೇಡ್ಕರ್ ಅವರಿಗೆ ಭಾರತ ರತ್ನ ಕೊಟ್ಟಿದ್ದು ಯಾರು? ಪ್ರಣಬ್ ಮುಖರ್ಜಿ, ಅಬ್ದುಲ್ ಕಲಾಂ ಅವರಿಗೆ ಭಾರತ ರತ್ನ ಕೊಟ್ಟಿದ್ದು ನಮ್ಮ ಸರ್ಕಾರವಲ್ಲವೇ? ಅವರ ಸೇವೆ ಗುರುತಿಸಿ ಬಿಹಾರದ ಮಾಜಿ ಸಿಎಂ ದಿ. ಕರ್ಪೂರಿ ಠಾಕೂರ್
ಪ್ರಶಸ್ತಿ ನೀಡಲಾಗಿದೆ ಎಂದರು.

ಭಕ್ತಿ ಕನ್ನಡಕ ಹಾಕಿ
ರಾವಣನ ಕನ್ನಡಕ ಹಾಕಿಕೊಂಡು ನೋಡಿದರೆ ರಾಮ ರಾಜ್ಯ ಕಾಣಿಸುವುದಿಲ್ಲ. ಭಕ್ತಿಯ ಕನ್ನಡಕದಿಂದ ನೋಡಿದರೆ ಎಲ್ಲೆಡೆಯೂ ರಾಮ ಕಾಣಿಸುತ್ತಾನೆ ಎಂದು ಬೊಮ್ಮಾಯಿ ಹೇಳಿದರು.
ಇನ್ನು ಹಾವೇರಿಯಲ್ಲಿ ಬಿಜೆಪಿ ಗೆಲ್ಲುವ ಅವಕಾಶ ಹೆಚ್ಚಿರುವುದರಿಂದ ಆಕಾಂಕ್ಷಿಗಳು ಹೆಚ್ಚಿದ್ದಾರೆ. ಬಿ.ಸಿ ಪಾಟೀಲ್, ಸಂದೀಪ್ ಪಾಟೀಲ್, ಈಶ್ವರಪ್ಪ ಮಗ ಸೇರಿದಂತೆ ಬಹಳ ಜನ ಇದ್ದಾರೆ ಎಂದರು.