ನ್ಯೂಸ್

ಪಾಕ್​ನ 'ಪರಮಾಣು ಬೆದರಿಕೆಗೆ' ಭಾರತ ಎಂದಿಗೂ ಮಣಿಯುವುದಿಲ್ಲ: ವಿದೇಶಾಂಗ ಸಚಿವ ಎಸ್ ಜೈಶಂಕರ್ | Nuclear Threat

Nuclear Threat: ಪಾಕಿಸ್ತಾನದ ಪರಮಾಣು ಬೆದರಿಕೆಗೆ ಭಾರತ ಎಂದಿಗೂ ಮಣಿಯುವುದಿಲ್ಲ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.

ಜರ್ಮನ್​​ನ ಬರ್ಲಿನ್​ನಲ್ಲಿ ನಡೆದ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ''ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಭಾರತ ಪ್ರತಿಕ್ರಿಯಿಸಿದ ತಕ್ಷಣ ನಾನು ಬರ್ಲಿನ್‌ಗೆ ಬಂದಿದ್ದೇನೆ. ಭಾರತ ಭಯೋತ್ಪಾದನೆಗೆ ಶೂನ್ಯ ಸಹಿಷ್ಣುತೆಯನ್ನು ಹೊಂದಿದೆ. ಭಾರತ ಎಂದಿಗೂ ಪರಮಾಣು ಬೆದರಿಕೆಗೆ ಮಣಿಯುವುದಿಲ್ಲ ಮತ್ತು ಭಾರತ ಪಾಕಿಸ್ತಾನದೊಂದಿಗೆ ಸಂಪೂರ್ಣವಾಗಿ ದ್ವಿಪಕ್ಷೀಯವಾಗಿ ವ್ಯವಹರಿಸುತ್ತದೆ" ಎಂದು ಸುದ್ದಿಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಪ್ರತಿಯೊಂದು ರಾಷ್ಟ್ರವೂ ಭಯೋತ್ಪಾದನೆಯ ವಿರುದ್ಧ ತನ್ನನ್ನು ತಾನು ರಕ್ಷಿಸಿಕೊಳ್ಳುವ ಹಕ್ಕನ್ನು ಹೊಂದಿದೆ ಎಂಬ ಜರ್ಮನಿಯ ತಿಳುವಳಿಕೆಯನ್ನು ನಾವು ಗೌರವಿಸುತ್ತೇವೆ ಎಂದಿದ್ದಾರೆ.

ಭಯೋತ್ಪಾದನೆಯ ವಿರುದ್ಧದ ಯಾವುದೇ ಹೋರಾಟವನ್ನು ಬರ್ಲಿನ್ ಬೆಂಬಲಿಸುತ್ತದೆ ಎಂದು ಹೇಳಿದ ಜರ್ಮನಿಯ ವಿದೇಶಾಂಗ ಸಚಿವ ಜೋಹಾನ್ ವಾಡೆಫುಲ್, ಭಯೋತ್ಪಾದನೆಗೆ ಜಗತ್ತಿನಲ್ಲಿ ಎಲ್ಲಿಯೂ ಸ್ಥಾನವಿಲ್ಲ ಎಂದು ಹೇಳಿದ್ದಾರೆ.(ಏಜೆನ್ಸೀಸ್​)