ತೀರ್ಥಹಳ್ಳಿಯಲ್ಲಿ ಆಯೋಜಿಸಿದ್ದ ಗಣರಾಜ್ಯೋತ್ಸವದಲ್ಲಿ ವಿವಿಧ ಕ್ಷೇತ್ರದ ಸಾಧಕ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ರಹಮತ್ ಉಲ್ಲಾ ಅಸಾದಿ, ಗೀತಾ ರಮೇಶ್, ಎಂ.ಶೈಲಾ ಇತರರಿದ್ದರು.  
ನ್ಯೂಸ್

ಪ್ರಬಲ ರಾಷ್ಟ್ರವಾಗುವತ್ತ ಭಾರತದ ದಾಪುಗಾಲು

ತೀರ್ಥಹಳ್ಳಿ: ದೇಶ ಕಟ್ಟುವ ಪ್ರಕ್ರಿಯೆ ನಿರಂತರ. ದುಡಿಯುವ ಕೈಗಳಿಗೆ ಉದ್ಯೋಗ ಸೃಷ್ಟಿಯೊಂದಿಗೆ ಗ್ರಾಮೀಣ ಭಾಗದ ಹಳ್ಳಿಗಳನ್ನು ಸಾಮಾಜಿಕ, ಆರ್ಥಿಕವಾಗಿ ಸದೃಢಪಡಿಸುವ ಅನಿವಾರ್ಯತೆ ಇದೆ ಎಂದು ತಹಸೀಲ್ದಾರ್ ಎಸ್.ರಂಜಿತ್ ಹೇಳಿದರು.

ಪಟ್ಟಣದ ಡಾ. ಯು.ಆರ್.ಅನಂತಮೂರ್ತಿ ಸರ್ಕಾರಿ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಭಾರತ ಇಂದು ಯುದ್ಧ ವಿಮಾನ ಸೇರಿ ಶಸಾಸಗಳನ್ನು ರ್ತು ಮಾಡುವ ಹಂತಕ್ಕೆ ಅಭಿವೃದ್ಧಿ ಹೊಂದಿದ್ದು, ವಿಶ್ವದ ನಾಲ್ಕನೇ ಪ್ರಬಲ ರಾಷ್ಟ್ರವಾಗಿದೆ ಎಂದರು.

ರಾಜಕೀಯ, ಸಾಹಿತ್ಯ, ಸಾಂಸ್ಕೃತಿಕ ಮತ್ತು ಧಾರ್ಮಿಕವಾಗಿ ಮುಂಚೂಣಿಯಲ್ಲಿರುವ ತೀರ್ಥಹಳ್ಳಿ ತಾಲೂಕಿನಲ್ಲಿ ಉದ್ಯೋಗದ ಕೊರತೆಯಿಂದಾಗಿ ಯುವಜನತೆ ಉದ್ಯೋಗ ಅರಸಿ ಹೊರ ಊರುಗಳಿಗೆ ತೆರಳುತ್ತಿದ್ದಾರೆ. ಈ ನಿಟ್ಟಿನಲ್ಲಿ ಸ್ವಾವಲಂಬನೆಗೆ ಪೂರಕವಾಗಿ ಸಣ್ಣ ಮತ್ತು ಮಧ್ಯಮ ವರ್ಗದ ಉದ್ದಿಮೆಗಳನ್ನು ಸ್ಥಾಪಿಸಬೇಕಿದೆ ಎಂದು ಹೇಳಿದರು.

ಶಾಸಕ ಆರಗ ಜ್ಞಾನೇಂದ್ರ ಮಾತನಾಡಿ, ನಮ್ಮ ಸಂವಿಧಾನವನ್ನು ಒಟ್ಟು 106 ಬಾರಿ ತಿದ್ದುಪಡಿ ಮಾಡಲಾಗಿದೆ. ಅದರಲ್ಲಿ ಬಹಳ ಮುಖ್ಯವಾಗಿ ತುರ್ತು ಪರಿಸ್ಥಿತಿ ಘೋಷಣೆಯ ಅವಧಿ ಕರಾಳವಾಗಿದೆ. ಮತ್ತೊಮ್ಮೆ ಅಂತಹ ಸ್ಥಿತಿ ನಿರ್ಮಾಣವಾಗದಂತೆ ಜಾಗ್ರತೆವಹಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ಪಪಂ ಅಧ್ಯಕ್ಷ ರಹಮತ್ ಉಲ್ಲಾ ಅಸಾದಿ, ಉಪಾಧ್ಯಕ್ಷೆ ಗೀತಾ ರಮೇಶ್, ತಾಪಂ ಇಒ ಎಂ.ಶೈಲಾ, ಬಿಇಒ ವೈ.ಗಣೇಶ್, ಪಪಂ ಸದಸ್ಯರು ಇದ್ದರು. ವಿವಿಧ ಕ್ಷೇತ್ರಗಳ ಸಾಧಕರನ್ನು ಗೌರವಿಸಲಾಯಿತು.