ನ್ಯೂಸ್

ಇಂಡಿಗೋ ವಿಮಾನಕ್ಕೆ ಬಾಂಬ್​ ಬೆದರಿಕೆ ಕರೆ; ತಕ್ಷಣವೇ ಪ್ರಯಾಣಿಕರನ್ನು ಕೆಳಗಿಳಿಸಿದ ಸಿಬ್ಬಂದಿ

ಮೋಹನ್​ ಶೆಟ್ಟಿ

ನವದೆಹಲಿ: ವಾರಣಾಸಿಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ದೆಹಲಿ ವಿಮಾನ ನಿಲ್ದಾಣದಲ್ಲಿ ಬಾಂಬ್ ಬೆದರಿಕೆ ಕರೆ ಬಂದ ಬೆನ್ನಲ್ಲೇ ಇದೀಗ ಏರ್​ಪೋರ್ಟ್​ ಅಧಿಕಾರಿಗಳು ವಿಮಾನವನ್ನು ತಪಾಸಣೆಗೆ ಒಳಪಡಿಸಿದ್ದಾರೆ ಎಂದು ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

6E2211 ವಿಮಾನವು ದೆಹಲಿಯ ಇಂದಿರಾಗಾಂಧಿ ವಿಮಾನ ನಿಲ್ದಾಣದಿಂದ ಇಂದು (ಮೇ.28) ಬೆಳಗ್ಗೆ 5 ಗಂಟೆ ಸುಮಾರಿಗೆ ಟೇಕ್ ಆಫ್ ಆಗಬೇಕಿತ್ತು. ಆದರೆ, ಈ ವಿಮಾನದೊಳಗೆ ಬಾಂಬ್ ಇಡಲಾಗಿದೆ ಎಂಬ ಬೆದರಿಕೆ ಕರೆ ಕೇಳಿಬರುತ್ತಿದ್ದಂತೆ ಅಧಿಕಾರಿಗಳು ವಿಮಾನದಲ್ಲಿದ್ದ ಪ್ರಯಾಣಿಕರನ್ನು ತಕ್ಷಣವೇ ಕೆಳಗಿಳಿಸಿ, ಹೆಚ್ಚಿನ ತಪಾಸಣೆ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ.

ಕ್ಷಿಪ್ರ ಪ್ರತಿಕ್ರಿಯೆ ತಂಡವನ್ನು ನಿಯೋಜಿಸಲಾಗಿದ್ದು, ಇಲ್ಲಿಯವರೆಗೆ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ ಎಂದು ಏರ್​​ಪೋರ್ಟ್​ ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ,(ಏಜೆನ್ಸೀಸ್).

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ....