KPSC ಮರುಪರೀಕ್ಷೆಯಲ್ಲಿ ಕನ್ನಡ ಮಾಧ್ಯಮ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ರಾಜ್ಯ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕೆಪಿಎಸ್ಸಿ ಮರುಪರೀಕ್ಷೆಯಲ್ಲಿ ಕನ್ನಡ ವ್ಯಾಕರಣ ದೋಷ, ತಪ್ಪು ಪದಗಳ ಪ್ರಯೋಗ, ಅಪಾರ್ಥ ಸೇರಿದಂತೆ ಇಂಗ್ಲಿಷ್ ನಿಂದ ಕನ್ನಡಕ್ಕೆ ಅನುವಾದ ಮಾಡುವಲ್ಲಿ 79 ದೋಷಗಳು ಕಂಡು ಬಂದಿವೆ ಎಂದು ವಿಷಯ ತಜ್ಞರು, ಸಾಹಿತಿಗಳು, ಕನ್ನಡಪರ ಸಂಘಟನೆಗಳು, ವಿದ್ಯಾರ್ಥಿ ಸಂಘಟನೆಗಳು ಸಿಎಂ ಸಿದ್ದರಾಮಯ್ಯಗೆ, ಕೆಪಿಎಸ್ಸಿ ಕಾರ್ಯದರ್ಶಿಗೆ, ಅಧ್ಯಕ್ಷರಿಗೆ ಪತ್ರ ಬರೆದಿದ್ದರೂ ಪರಿಗಣಿಸದ ಸರ್ಕಾರ, ಕೇವಲ 39 ತಪ್ಪುಗಳಿಗೆ ಕೃಪಾಂಕ ನೀಡುವ ಮೂಲಕ ಕನ್ನಡ ಮಾಧ್ಯಮ ಮತ್ತು ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ ಮಾಡಿದೆ ಎಂದು ತಮ್ಮ ಎಕ್ಸ್ ಖಾತೆಯಲ್ಲಿನ ಹಂಚಿಕೊಳ್ಳುವ ಮೂಲಕ ಕಿಡಿಕಾರಿದ್ದಾರೆ.
ಇದನ್ನೂ ಓದಿ:ಚಿಕ್ಕ ಮಗುವಿನಂತೆ ಕಾಣಲು ಪಾಲಕರಿಂದ ಮಗಳಿಗೆ ಕಠಿಣ ಡಯಟ್; ಇದೀಗ ಯುವತಿ ಪರಿಸ್ಥಿತಿ ನೋಡಿದರೆ ಎಂತಹ ಘೋರ! Strict diet
ಕನ್ನಡ ಮಾಧ್ಯಮ ವಿದ್ಯಾರ್ಥಿಗಳು, ಹಳ್ಳಿಗಾಡಿನ ವಿದ್ಯಾರ್ಥಿಗಳು ಅಂದರೆ ತಮ್ಮ ಸರ್ಕಾರಕ್ಕೆ ಯಾಕಿಷ್ಟು ತಾತ್ಸಾರ? ಬಡವರ ಮಕ್ಕಳು ಕೆ.ಎ.ಎಸ್ ಅಧಿಕಾರಿ ಆಗಬೇಕು, ಗೆಜೆಟೆಡ್ ಅಧಿಕಾರಿ ಆಗಬೇಕು ಎಂದು ಕನಸು ಕಾಣುವುದೇ ತಪ್ಪಾ? ಎಂದು ಪ್ರಶ್ನಿಸಿರುವ ಅಶೋಕ, ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ದ್ರೋಹ ಮಾಡುತ್ತಿರುವ ನಿಮ್ಮ ಕನ್ನಡ ವಿರೋಧಿ, ನಾಡದ್ರೋಹಿ ಕಾಂಗ್ರೆಸ್ ಸರ್ಕಾರವನ್ನ ತಾಯಿ ಭುವನೇಶ್ವರಿ ಎಂದಿಗೂ ಕ್ಷಮಿಸುವುದಿಲ್ಲ ಎಂದು ಹರಿಹಾಯ್ದಿದ್ದಾರೆ.
ಕೆಪಿಎಸ್ಸಿ ನಡೆಸುತ್ತಿರುವ ಪ್ರತಿಯೊಂದು ಪರೀಕ್ಷೆಗಳಲ್ಲಿಯೂ ಗೊಂದಲಗಳು, ಲೋಪಗಳು, ಭಾಷಾಂತರ ದೋಷಗಳು ಬಯಲಾಗುತ್ತಲೇ ಇವೆ. ಈ ಹಿಂದಿನ ಪರೀಕ್ಷೆಯಲ್ಲೂ ಕನ್ನಡ ಭಾಷಾ ಪರೀಕ್ಷಾರ್ಥಿಗಳ ಪ್ರಶ್ನೆ ಪತ್ರಿಕೆಗಳನ್ನು ಸಮರ್ಪಕವಾಗಿ ಭಾಷಾಂತರಿಸದೇ ಯಡವಟ್ಟು ಮಾಡಿ ಲಕ್ಷಾಂತರ ಪರೀಕ್ಷಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಕರ್ನಾಟಕದ ಮಾತೃಭಾಷೆಯಲ್ಲಿಯೇ ಸೂಕ್ತ ಪ್ರಶ್ನೆಗಳನ್ನು ನೀಡುವಲ್ಲಿ ಸಂಪೂರ್ಣ ವಿಫಲವಾಗಿ ಪದೇ ಪದೇ ಕೆಎಎಸ್ ಪರೀಕ್ಷಾರ್ಥಿಗಳನ್ನು ಗೊಂದಲಕ್ಕೆ ದೂಡುತ್ತಿರುವ ಬೇಜವಾಬ್ದಾರಿತನ ಪದೇ ಪದೇ ಮರುಕಳಿಸುತ್ತಿರುವುದು ಕೆಪಿಎಸ್‌ಸಿ ವೈಫಲ್ಯ ಹಾಗೂ ರಾಜ್ಯ ಸರ್ಕಾರದ ಅಸಮರ್ಥ ಆಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಸರ್ಕಾರದ ವಿರುದ್ಧಮ ಕಿಡಿಕಾಡಿದ್ದಾರೆ.