ಸುಂಟಿಕೊಪ್ಪ: ವಿಶ್ವ ಹಿಂದು ಪರಿಷತ್ ಮತ್ತು ಗೌರಿ ಗಣೇಶೋತ್ಸವ ಆಚರಣಾ ಸಮಿತಿ ವತಿಯಿಂದ ಶನಿವಾರ ಇಲ್ಲಿನ ಶ್ರೀರಾಮ ಮಂದಿರದಲ್ಲಿ ಗೌರಿ-ಗಣೇಶ ಮೂರ್ತಿ ಪ್ರತಿಷ್ಠಾಪಿಸಲಾಯಿತು.
ಹಿರಿಯ ಅರ್ಚಕ ದರ್ಶನ್ ಭಟ್, ಮನೋಜ್ ಭಟ್ ಪೂಜಾ ಕೈಂಕರ್ಯ ನೆರವೇರಿಸಿದರು. ಶ್ರೀ ಗೌರಿಗಣೇಶೋತ್ಸವ ಸಮಿತಿಯ ಅಧ್ಯಕ್ಷ ಎಸ್.ವಿಘ್ನೇಶ್, ಉಪಾಧ್ಯಕ್ಷ ಬಿ.ಕೆ.ಪ್ರಶಾಂತ್, ಎಂ.ಗಣೇಶ್.ಸಿ.ಸುನಿಲ್‌ಕುಮಾರ್, ಪ್ರದಾನ ಕಾರ್ಯದರ್ಶಿ ಎಂ.ಎಚ್.ನಿಖಿಲ್, ಖಜಾಂಜಿ ಬಿ.ಡಿ.ಪದ್ಮನಾಭ ಇತರರು ಇದ್ದರು.