ನ್ಯೂಸ್

ಪದವಿ ಕಾಲೇಜುಗಳಲ್ಲಿ ಯೋಗ ದಿನಾಚರಣೆಗೆ ಸೂಚನೆ

ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜೂ.21ರಂದು ಅಂತಾರಾಷ್ಟ್ರೀಯ ಯೋಗ ದಿನವನ್ನಾಗಿ ಆಚರಿಸುವಂತೆ ಕಾಲೇಜು ಸಿಕ್ಷಣ ಇಲಾಖೆಯು ಸೂಚನೆ ನೀಡಿದೆ.

ಯೋಗವು ಭಾರತದ ಪ್ರಾಚೀನ ಸಂಪ್ರದಾಯದ ಒಂದು ಅಮೂಲ್ಯ ಕೊಡುಗೆಯಾಗಿದ್ದು, ಇದು ಮನಸ್ಸು ಮತ್ತು ದೇಹದ ಐಕ್ಯತೆಯನ್ನು ಸಾಕಾರಗೊಳಿಸಿದೆ. ಯೋಗವು ನಮ್ಮ ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಲು ಉದ್ದೇಶಿಸಲಾಗಿರುವಂತಹ ಉತ್ತಮ ಜೀವನ ನಿರ್ವಹಣೆಯ ಒಂದು ವಿಜ್ಞಾನವಾಗಿದೆ.

ಇದನ್ನೂ ಓದಿ: ಅಪ್ಪ ಚಾಕಲೇಟ್​ಗೆ ದುಡ್ಡು ಕೊಡಲಿಲ್ಲ…ಫ್ರೀ ಬಸ್ ಏರಿ ಧರ್ಮಸ್ಥಳಕ್ಕೆ ಹೋದ ಅಕ್ಕ-ತಂಗಿ!

ಮನುಷ್ಯನ ಶಾರೀರಿಕ, ಬೌದ್ಧಿಕ, ಭಾವನಾತ್ಮಕ, ಮಾನಸಿಕ ಮತ್ತು ಆಧ್ಯಾತ್ಮಿಕ ಸ್ತರಗಳಲ್ಲಿ ಕೆಲಸ ಮಾಡುತ್ತದೆ. ಇಂದಿನ ಮತ್ತು ನಾಳೆಯ ಅಗತ್ಯವೂ ಆಗಿದೆ. ಯೋಗವನ್ನು ಅಭ್ಯಾಸ ಮಾಡುವುದರಿಂದ ಭಾವನಾತ್ಮಕ, ಮಾನಸಿಕ ಮತ್ತು ಶಾರೀರಿಕವಾಗಿಯೂ ಸಾಕಷ್ಟು ಪರಿಣಾಮ ಬೀರಲಿದೆ.

ಈ ಹಿನ್ನೆಲೆಯಲ್ಲಿ ಜೂ.21ರಂದು ಕಾಲೇಜುಗಳಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಿ ಯೋಗದ ಮಹತ್ವ ಮತ್ತು ಪ್ರಯೋಜನಗಳ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದೆ. ಯೋಗ ದಿನಾಚರಣೆ ಫೋಟೋಗಳನ್ನು ಕಾಲೇಜಿನ ವೆಬ್‌ಸೈಟ್‌ಗಳಲ್ಲಿ ಅಪ್‌ಲೋಡ್ ಮಾಡುವಂತೆ ಇಲಾಖೆ ನಿರ್ದೇಶಕರು ನಿರ್ದೇಶನ ನೀಡಿದ್ದಾರೆ.(ಏಜೆನ್ಸೀಸ್​)