ನ್ಯೂಸ್

ಉಡುಪಿಯಿಂದ ಅಂತಾರಾಷ್ಟ್ರೀಯ ಡ್ರಗ್ಸ್ ಜಾಲ ಕಾರ್ಯಾಚರಣೆ: 8 ಮಂದಿ ಸೆರೆ| drug

ಉಡುಪಿ: ಅಂತಾರಾಷ್ಟ್ರೀಯ ಡ್ರಗ್ಸ್‌ ನಿಗ್ರಹ ಕಾರ್ಯಾಚರಣೆಯಲ್ಲಿ ಭಾರತದ ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ (ಎನ್‌ಸಿಬಿ) ‘ಆಪರೇಷನ್ ಮೆಡ್ ಮ್ಯಾಕ್ಸ್‌’ ಹೆಸರಲ್ಲಿ ಅಮೆರಿಕ, ಆಸ್ಟ್ರೇಲಿಯಾ, ಭಾರತ ಸೇರಿದಂತೆ 10ಕ್ಕೂ ಹೆಚ್ಚು ದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಡ್ರಗ್ ಸಿಂಡಿಕೇಟ್ ಅನ್ನು ಪತ್ತೆ ಹಚ್ಚಿದೆ.

ವಿದೇಶಗಳಲ್ಲಿ ನಿಷೇಧಿತ ಔಷಧಿ ಪೂರೈಸುವ ಜಾಲ ಇದಾಗಿದ್ದು, ಆನ್​ಲೈನ್​ ಜಾಹೀರಾತು ಮೂಲಕ ಹಾಗೂ ಕರೆಗಳ ಮುಖಾಂತರ ವಿದೇಶಗಳಲ್ಲಿ ಡ್ರಗ್ಸ್ ವಿತರಣೆ ಮಾಡಲಾಗುತ್ತಿತ್ತು. ಗ್ರಾಹಕರ ಕರೆಗಳನ್ನು ಸ್ವೀಕರಿಸಲು ಉಡುಪಿಯಲ್ಲಿ ಕಾಲ್ ಸೆಂಟರ್ ಇದ್ದ ಬಗ್ಗೆ ಶಂಕೆ ವ್ಯಕ್ತವಾಗಿದೆ.

ಈ ಕಾರ್ಯಾಚರಣೆಯಲ್ಲಿ 8 ಮಂದಿಯನ್ನು ಸೆರೆಹಿಡಿಯಲಾಗಿದ್ದು, 5 ಡ್ರಗ್ಸ್‌ ಸರಕನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ತಮಿಳುನಾಡು ಮೂಲದ ಆರೋಪಿ ಜಾಯಲ್ ಅಲ್ಬಾ ಎಂಬಾತನನ್ನು ಎನ್​ಸಿಬಿ ಅಧಿಕಾರಿಗಳು ಉಡುಪಿಯಲ್ಲಿ ಬಂಧಿಸಿದ್ದು, ಗ್ರಾಹಕರ ಕರೆಗಳನ್ನು ಸ್ವೀಕರಿಸಲು ಉಡುಪಿಯಲ್ಲಿ ಕಾಲ್ ಸೆಂಟರ್​ ಇದ್ದ ಶಂಕೆ ವ್ಯಕ್ತವಾಗಿದೆ.

(ಏಜೆನ್ಸೀಸ್)

ಕೇಂದ್ರ ಗೃಹ ಇಲಾಖೆ ಹಾಗೂ ಎನ್‌ಸಿಬಿ ಸಹಿತ ತನಿಖಾ ಸಂಸ್ಥೆಗಳು ಮಾದಕ ಜಾಲಗಳ ಮೇಲೆ ನಿಗಾ ವಹಿಸಿ, ನಿರಂತರ ಮೇಲ್ವಿಚಾರಣೆ ಮಾಡುತ್ತಿದೆ. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರ ಪ್ರತಿಯೊಂದು ಮಾದಕ ದ್ರವ್ಯ ಕಳ್ಳ ಸಾಗಣೆ ಜಾಲ ಮಟ್ಟಹಾಕಲು ದೃಢ ನಿಶ್ಚಯ ಹೊಂದಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.