ಲಾಹೋರ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಬಸ್ ಮತ್ತು ವ್ಯಾನ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ವಿಶ್ವವಿದ್ಯಾಲಯದ ಕ್ರೀಡಾಪಟುಗಳು ಸೇರಿದಂತೆ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ ಮತ್ತು 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.
ಲಾಹೋರ್‌ನಿಂದ ಸುಮಾರು 200 ಕಿಲೋಮೀಟರ್ ದೂರದಲ್ಲಿರುವ ಅಡ್ಡಾ ಫಕೀರ್ ದಿ ಕುಲ್ಲಿ ಪ್ರದೇಶದಲ್ಲಿ ಬುಧವಾರ ಈ ಘಟನೆ ನಡೆದಿದೆ.
ಫೈಸಲಾಬಾದ್ ಉಪ ಆಯುಕ್ತ ಅಲಿ ಅಕ್ಬರ್ ಭಿಂದರ್ ಅವರ ಪ್ರಕಾರ, ಪಶುವೈದ್ಯಕೀಯ ಮತ್ತು ಪ್ರಾಣಿ ವಿಜ್ಞಾನ ವಿಶ್ವವಿದ್ಯಾಲಯದ (UVAS) ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ವಿವಿಧ ಆಟಗಳಲ್ಲಿ ಭಾಗವಹಿಸಲು ಲಾಹೋರ್‌ಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು ಎಂದು ಸುದ್ದಿಸಂಸ್ಥೆ ಪಿಟಿಐ ಉಲ್ಲೇಖಿಸಿದೆ,(ಏಜೆನ್ಸೀಸ್).