ಸಾಂದರ್ಭಿಕ ಚಿತ್ರ 
ವಿದೇಶ

ನ್ಯೂಯಾರ್ಕ್​​ನಲ್ಲಿ ಡೆಲಿವರಿ ಬಾಯ್ ಕೆಲಸ ಮಾಡ್ತಿದ್ದ ಭಾರತೀಯ ಮೂಲದ ಯುವಕನನ್ನು ಗುಂಡಿಕ್ಕಿ ಹತ್ಯೆ | New York

ವಾಷಿಂಗ್ಟನ್​: ಅಮೆರಿಕದ ನ್ಯೂಯಾರ್ಕ್‌ನಲ್ಲಿ(New York) ಪಿಜ್ಜಾ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಭಾರತೀಯ ಮೂಲದ 26 ವರ್ಷದ ಯುವಕನೊಬ್ಬನನ್ನು ಗುಂಡಿಕ್ಕಿ ಕೊಂದ ಘಟನೆ ಶನಿವಾ(ಜೂ. 06) ವರದಿಯಾಗಿದೆ.
ಮಾಹಿತಿಯ ಪ್ರಕಾರ, ತೆಲಂಗಾಣ ಮೂಲದ ಮೇಡ್ಚಲ್ ಜಿಲ್ಲೆಯ ಗುಂಡ್ಲಪೋಚಂಪಲ್ಲಿ ಮೂಲದ ಯುವಕ ಅಮೆರಿಕದಲ್ಲಿ ವಾಸಿಸುತ್ತಿದ್ದು, ಪಿಜ್ಜಾ ಡೆಲಿವರಿ ಚಾಲಕನಾಗಿ ಅರೆಕಾಲಿಕ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.
ಶುಕ್ರವಾರ ಅವರು ತಡರಾತ್ರಿ ವಸ್ತು ವಿತರಣೆ ಮಾಡುತ್ತಿದ್ದಾಗ ಅಪರಿಚಿತ ದುಷ್ಕರ್ಮಿಗಳು ಅವರ ಮೇಲೆ ಗುಂಡು ಹಾರಿಸಿದ್ದಾರೆ. ತೀವ್ರ ಗುಂಡೇಟಿನ ಗಾಯಗಳಾಗಿದ್ದು, ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟಿದ್ದಾರೆ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಗುಂಡಿನ ದಾಳಿಯ ಉದ್ದೇಶದ ಬಗ್ಗೆ ತನಿಖೆ ಆರಂಭಿಸಿದ್ದಾರೆ (ಏಜೆನ್ಸೀಸ್).