India protests | ಅಲ್ಪಸಂಖ್ಯಾತರ ಸುರಕ್ಷತೆ ಮುಖ್ಯ: ಬಾಂಗ್ಲಾದ ಮಧ್ಯಂತರ ಸರ್ಕಾರದ ವಿರುದ್ಧ ಭಾರತ ಗರಂ 
ವಿದೇಶ

India protests | ಢಾಕಾದಲ್ಲಿ ಹಿಂದೂಗಳ ಹತ್ಯೆ, ಅಲ್ಪಸಂಖ್ಯಾತರ ಸುರಕ್ಷತೆ ಮುಖ್ಯ: ಬಾಂಗ್ಲಾದ ಮಧ್ಯಂತರ ಸರ್ಕಾರದ ವಿರುದ್ಧ ಭಾರತ ಗರಂ

ನವದೆಹಲಿ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ಹೆಚ್ಚುತ್ತಿರುವ ಹಿಂಸಾಚಾರದ ಬಗ್ಗೆ ಭಾರತದ ವಿದೇಶಾಂಗ ಸಚಿವಾಲಯ(India protests) ಶುಕ್ರವಾರ (ಡಿ.26) ತೀವ್ರ ಕಳವಳ ವ್ಯಕ್ತಪಡಿಸಿದೆ.
ಈ ಬಗ್ಗೆ ಮಾತನಾಡಿರುವ MEA ವಕ್ತಾರ ರಣಧೀರ್ ಜೈಸ್ವಾಲ್, ನೆರೆಯ ದೇಶದಲ್ಲಿ ಹಿಂದೂಗಳ ಮೇಲೆ ಹಿಂಸಾತ್ಮಕ ದಾಳಿಯ ಮಾದರಿಯನ್ನು ತೋರಿಸಿದೆ. ಅಲ್ಲದೆ, ಎಲ್ಲಾ ನಾಗರಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವಂತೆ ಢಾಕಾದಲ್ಲಿರುವ ಮಧ್ಯಂತರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಹಿಂಸಾಚಾರವನ್ನು ಖಂಡಿಸಿದ ಭಾರತ
ಮೈಮೆನ್ಸಿಂಗ್‌ನಲ್ಲಿ ದೀಪು ಚಂದ್ರ ದಾಸ್ ಮತ್ತು ರಾಜ್‌ಬರಿಯಲ್ಲಿ ಅಮೃತ್ ಮಂಡಲ್ ಎಂಬ ಇಬ್ಬರು ಹಿಂದೂಗಳನ್ನು ಭೀಕರವಾಗಿ ಥಳಿಸಿ ಹತ್ಯೆ ಮಾಡಿದ ಘಟನೆಗಳ ನಂತರ ಭಾರತ ಈ ಪ್ರತಿಕ್ರಿಯೆ ನೀಡಿದೆ. ಈ ಘಟನೆಗಳು ಅಂತರಾಷ್ಟ್ರೀಯವಾಗಿ ಆಕ್ರೋಶಕ್ಕೆ ಕಾರಣವಾಗಿವೆ.

ನೆರೆಯ ದೇಶದಲ್ಲಿ ಹೆಚ್ಚುತ್ತಿರುಗವ ಹಿಂಸಾಚಾರದ ಪ್ರಮಾಣ

ಬಾಂಗ್ಲಾದಲ್ಲಿರುವ ಮಧ್ಯಂತರ ಸರ್ಕಾರ ಅಧಿಕಾರ ವಹಿಸಿಕೊಂಡಾಗಿನಿಂದ, ಅಲ್ಪಸಂಖ್ಯಾತರ ವಿರುದ್ಧದ ಹತ್ಯೆಗಳು, ಬೆಂಕಿ ಹಚ್ಚುವಿಕೆ ಮತ್ತು ಭೂಕಬಳಿಕೆ ಸೇರಿದಂತೆ 2,900 ಕ್ಕೂ ಹೆಚ್ಚು ಹಿಂಸಾಚಾರದ ಘಟನೆಗಳು ದಾಖಲಾಗಿವೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ಮುಂದುವರೆದು ಮಾತನಾಡಿರುವ MEA ವಕ್ತಾರ ಜೈಸ್ವಾಲ್​, ಬಾಂಗ್ಲಾದಲ್ಲಿ ಸಂಭವಿಸುತ್ತಿರುವ ಈ ಘಟನೆಗಳು ಕೇವಲ ಮಾಧ್ಯಮ ಉತ್ಪ್ರೇಕ್ಷೆ ಅಥವಾ ಕಟ್ಟುನಿಟ್ಟಾಗಿ ರಾಜಕೀಯ ಹಿಂಸಾಚಾರ ಎಂಬ ಹೇಳಿಕೆಗಳನ್ನು ಜೈಸ್ವಾಲ್ ಸ್ಪಷ್ಟವಾಗಿ ತಿರಸ್ಕರಿಸಿದ್ದಾರೆ. ಅಲ್ಲದೆ, ಈ ದಾಳಿಗಳನ್ನು ಉಗ್ರರು ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಪ್ರಜಾಪ್ರಭುತ್ವ ಪ್ರಕ್ರಿಯೆಗಳಿಗೆ ಬೆಂಬಲ

ಈ ನಡುವೆ 17 ವರ್ಷಗಳ ಗಡಿಪಾರಾದ ನಂತರ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ (ಬಿಎನ್‌ಪಿ) ಹಂಗಾಮಿ ಅಧ್ಯಕ್ಷ ತಾರಿಕ್ ರೆಹಮಾನ್ ಮರಳಿದ್ದಾರೆ. ಈ ಅಶಾಂತಿಯ ನಡುವೆಯೂ ಬಾಂಗ್ಲಾದ ರಾಜಕೀಯ ಚಿತ್ರಣ ಬದಲಾಗುತ್ತಿದೆ.
ಬಾಂಗ್ಲಾದೇಶದಲ್ಲಿ ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳನ್ನು ಭಾರತ ಬೆಂಬಲಿಸುತ್ತದೆ. ಅಲ್ಲದೆ, ಈ ಬೆಳವಣಿಗೆಯನ್ನು ವಿರೋಧ ಪಕ್ಷದ ನಾಯಕರ ಮರಳುವಿಕೆ ಆ ಸಂದರ್ಭದಲ್ಲಿ ನೋಡಬೇಕು ಎಂದು ವಿದೇಶಾಂಗ ಸಚಿವಾಲಯದ ವಕ್ತಾರರು ಹೇಳಿದ್ದಾರೆ.
2026 ಫೆಬ್ರವರಿ12 ರಂದು ಬಾಂಗ್ಲಾದಲ್ಲಿ ಸಾರ್ವತ್ರಿಕ ಚುನಾವಣೆಗಳು ನಿಗದಿಯಾಗಿವೆ.ಅಲ್ಲದೆ, ಪ್ರಾದೇಶಿಕ ಭದ್ರತೆ, ಪ್ರಜಾಪ್ರಭುತ್ವ ಮತ್ತು ಎಲ್ಲರನ್ನೂ ಒಳಗೊಂಡ ಬಾಂಗ್ಲಾದೇಶ ಅತ್ಯಗತ್ಯ ಎಂಬ ತನ್ನ ನಿಲುವನ್ನು ಭಾರತ ಪುನರುಚ್ಚರಿಸಿದೆ,(ಏಜೆನ್ಸೀಸ್).