ಸಾಂದರ್ಭಿಕ ಚಿತ್ರ 
ವಿದೇಶ

ಅಫ್ಘಾನಿಸ್ತಾನದಲ್ಲಿ ಪ್ರಭಲ ಭೂಕಂಪನ: ರಿಕ್ಟರ್ ಮಾಪಕದಲ್ಲಿ 6.2ರಷ್ಟು ತೀವ್ರತೆ ದಾಖಲು: ದೆಹಲಿ, ಕಾಶ್ಮೀರದಲ್ಲೂ ಕಂಪನದ ಅನುಭವ | Earthquake

Earthquake: ಅಫ್ಘಾನಿಸ್ತಾನದಲ್ಲಿ ಶನಿವಾರ ಸಂಜೆ 7 ಗಂಟೆ ಸುಮಾರಿ ಪ್ರಭಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.2ರಷ್ಟು ತೀವ್ರತೆ ದಾಖಲಾಗಿದ್ದು, ದೆಹಲಿ, ಕಾಶ್ಮೀರದಲ್ಲೂ ಕಂಪನದ ಅನುಭವವಾಗಿದೆ ಎಂದು ವರದಿಯಾಗಿದೆ.
ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ(NCS) ಪ್ರಕಾರ, ಭೂಕಂಪವು ಭಾರತೀಯ ಕಾಲಮಾನ ಸಂಜೆ 7.04 ಕ್ಕೆ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದು ಅಫ್ಘಾನಿಸ್ತಾನದಲ್ಲಿ 215 ಕಿಲೋಮೀಟರ್ ಆಳದಲ್ಲಿತ್ತು ಎಂದು ತಿಳಿಸಿದೆ.
ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ (ಯುಎಸ್‌ಜಿಎಸ್) ಪ್ರಕಾರ, ಈಶಾನ್ಯ ಅಫ್ಘಾನಿಸ್ತಾನದ ಜುರ್ಮ್‌ನಿಂದ ದಕ್ಷಿಣಕ್ಕೆ ಸುಮಾರು 43 ಕಿಲೋಮೀಟರ್ ದೂರದಲ್ಲಿ ಭೂಕಂಪನ ಕೇಂದ್ರ ಬಿಂದು ದಾಖಲಾಗಿದೆ ಎಂದು ಹೇಳಿದೆ.
ಇನ್ನೂ ಭೂಕಂಪದ ಬಳಿಕ ಸಾವುನೋವು ಅಥವಾ ಹಾನಿಯ ಬಗ್ಗೆ ತಕ್ಷಣದ ವರದಿಗಳು ಬಂದಿಲ್ಲ. ಭಾರತವಷ್ಟೇ ಅಲ್ಲದೇ ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲೂ ಕಂಪನದ ಅನುಭವವಾಗಿದ್ದು, ಎರಡೂ ದೇಶಗಳ ನಿವಾಸಿಗಳಲ್ಲಿ ಸ್ವಲ್ಪ ಸಮಯದವರೆಗೆ ಭಯಭೀತರಾಗಿದ್ದರು ಎನ್ನಲಾಗಿದೆ (ಏಜೆನ್ಸೀಸ್).