ನ್ಯೂಸ್

ನಿಗದಿತ ಗುರಿ ಸಾಧನೆಗೆ ಅಧಿಕಾರಿಗಳಿಗೆ ಸೂಚನೆ

ಬೆಂಗಳೂರು: ಮಹಿಳೆಯರು ಮತ್ತು ಮಕ್ಕಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಬಾಕಿ ಇರುವ ಕಾರ್ಯಕ್ರಮಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಮುಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರೆ ಸೂಚಿಸಿದರು.

ವಿಧಾನಸೌಧದ ತಮ್ಮ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, 2024-25ನೇ ಸಾಲಿನ ಕಾರ್ಯಕ್ರಮ ಹಾಗೂ ಕ್ರಿಯಾ ಯೋಜನೆಗಳ ವಿವರ ಪಡೆದರು.

2024-25 ನೇ ಸಾಲಿನ ಅನುದಾನ ಹಂಚಿಕೆಯಾಗಿರುವ ಬಗ್ಗೆ ಮಾಹಿತಿ ಪಡೆದರು. ಸಮಗ್ರ ಶಿಶು ಅಭಿವೃದ್ಧಿ ಯೋಜನೆ (ಐಸಿಡಿಎಸ್), ಸ್ತ್ರೀ ಶಕ್ತಿ ಯೋಜನೆ, ಮಹಿಳಾ ಕಲ್ಯಾಣ, ಮಕ್ಕಳ ಕಲ್ಯಾಣ, ಗೃಹ ಲಕ್ಷ್ಮಿ ಸೇರಿದಂತೆ ವಿವಿಧ ಯೋಜನೆಗಳ ಪ್ರಗತಿ ಕುರಿತು ಮಾಹಿತಿ ಪಡೆದರು. ಜತೆಗೆ ಬಾಕಿ ಉಳಿದಿರುವ ಕೆಲಸಗಳನ್ನು ತ್ವರಿತವಾಗಿ ಮುಕ್ತಾಯಗೊಳಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಐಸಿಡಿಎಸ್ ನಿರ್ದೇಶಕರಾದ ಎಂ.ಆರ್.ರವಿಕುಮಾರ್, ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕ ಎನ್.ಸಿದ್ದೇಶ್ವರ್, ಹಿರಿಯ ಅಧಿಕಾರಿಗಳಾದ ಪುಷ್ಪ ರಾಯ್ಕರ್, ಮೈತ್ರಿ, ಬಸವರಾಜು ಮತ್ತಿತರರು ಉಪಸ್ಥಿತರಿದ್ದರು.