ನ್ಯೂಸ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆದರಿಸುವ ಕೆಲಸ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಕಚೇರಿ ಮೇಲಿನ ಇಡಿ ದಾಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆದರಿಸುವ ಕೆಲಸವಷ್ಟೇ. ಹಾಗಾಗಿ ಉಪ ಚುನಾವಣೆಯಲ್ಲಿ ಜನರು ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹೇಳಿದರು.

ಎರಡು ದಿನಗಳ ಇಡಿ ದಾಳಿಯಲ್ಲಿ ಅನೇಕ ದಾಖಲೆಗಳನ್ನು ಕೊಂಡೋಯ್ಯಲಾಗಿದೆ. ಯಾವುದಾದರೂ ತನಿಖಾ ಸಂಸ್ಥೆ ಮನಿ ಲಾಂಡ್ರಿಗ್ ಆಗಿದೆ ಎಂದು ವರದಿ ನೀಡಿದಾಗ ಇಡಿ ಬರಬೇಕು. ಲೋಕಾಯುಕ್ತ ಮತ್ತು ನ್ಯಾಯಧೀಶರ ತನಿಖಾ ತಂಡ ತನಿಖೆ ಮಾಡುವ ಹಂತದಲ್ಲೇ ಇಡಿ ಬಂದಿದೆ. ಸಾಕ್ಷಿ, ದಾಖಲೆಗಳನ್ನ ಸೃಷ್ಟಿ ಮಾಡುವ ಕೆಲಸಕ್ಕೆ ಇಡಿ ಅಧಿಕಾರಿಗಳು ಮುಂದಾಗಿದ್ದಾರೆ. ಕ್ರೈಮ್ ನಡೆಯುವ ಮುನ್ನವೇ ಇವರೇ ಕೆಲವು ಅಧಿಕಾರಿಗಳನ್ನ ಬೆದರಿಸಿ, ಸಹಿ ಮಾಡಿಸಿಕೊಳ್ಳುವ ಕೆಲಸಕ್ಕೆ ಮುಂದಾಗಿದ್ದಾರೆ. ಹೀಗಾಗಿ ಇಡಿ ಅಧಿಕಾರಿಗಳ ನಡೆಯ ಬಗ್ಗೆ ಕೋರ್ಟ್ ಗಮನಕ್ಕೆ ತರುತ್ತೇವೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಈಗಾಗಲೇ ಹಲವು ರಾಜ್ಯಗಳಲ್ಲಿ ಚುನಾವಣೆ ಬರುತ್ತಿವೆ. ರಾಜ್ಯದಲ್ಲಿಯೂ ಉಪ ಚುನಾವಣೆ ನಡೆಯುತ್ತಿದೆ. ಈ ವೇಳೆ ವಿಚಾರಣೆಗೆ ಹಾಜರಾಗುವಂತೆ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡುವ ಸಾಧ್ಯತೆ ಇದೆ. ಬಿಜೆಪಿಯವರ ಮನಸ್ಥಿತಿ ಏನೆಂಬುದನ್ನು ಇದು ತಿಳಿಸುತ್ತದೆ. ಸಾವಿರಾರು ಕೋಟಿ ಹಗರಣದಲ್ಲಿ ಭಾಗಿಯಾಗಿರೋರು ಬಿಜೆಪಿ ಸೇರ್ಪಡೆಯಾದರೆ ಕ್ಲಿನ್ ಚೀಟ್ ಕೊಡಿಸುವ ಕೆಲಸ ಆಗುತ್ತದೆ. ಅಜಿತ್ ಪವಾರ್, ಚಂದ್ರಬಾಬು ನಾಯ್ಡು ಸೇರಿದಂತೆ ಹಲವರ ಹಗರಣಗಳಿಗೆ ಕ್ಲಿನ್ ಚೀಟ್ ನೀಡಲಾಗಿದೆ. ಬಿಜೆಪಿಯವರು ದೇಶದಲ್ಲಿ ಅಧಿಕಾರಕ್ಕಾಗಿ ಯಾವುದೇ ಹಂತಕ್ಕೆ ಬೇಕಿದರೂ ಹೋಗುತ್ತಾರೆ ಎಂದು ಕಿಡಿಕಾರಿದರು.