ಮೈಸೂರು: 2024-25 ನೇ ಸಾಲಿನಲ್ಲಿ(Passed year 2023-24) ಮೆಟ್ರಿಕ್ ನಂತರದ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳ ಪ್ರೋತ್ಸಾಹಧನಕ್ಕಾಗಿ ಆನ್‌ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪಿಯುಸಿ, ಪದವಿ, ಸ್ನಾತಕೋತ್ತರ ಪದವಿಗಳಾದ MA, M.sc, M.com, MBA, MCA, MFA ಇತ್ಯಾದಿ ಹಾಗೂ ಅಗ್ರಿಕಲ್ಚರ್ ಇಂಜಿನಿಯರಿoಗ್/ madicine/Veterinary ಕೋರ್ಸ್ನ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸಮಾಜ ಕಲ್ಯಾಣ ಇಲಾಖಾ ವೆಬ್‌ಸೈಟ್ www.sw.kar.nic.in ನಲ್ಲಿ ಅರ್ಜಿ ಸಲ್ಲಿಸಿ, ಅರ್ಜಿ ಸಲ್ಲಿಸಿದ 4 ದಿನಗಳೊಳಗೆ ಡೌನ್‌ಲೋಡ್ ಮಾಡಿದ ಅರ್ಜಿಯೊಂದಿಗೆ ಜಾತಿ ಪ್ರಮಾಣ ಪತ್ರದ ದೃಢೀಕೃತ ಜೆರಾಕ್ಸ್ ಪ್ರತಿ, ಆಧಾರ್ ಕಾರ್ಡ್ ಜೆರಾಕ್ಸ್, ಮೂಲ ಅಂಕಪಟ್ಟಿಗಳ ದೃಢೀಕೃತ ಜೆರಾಕ್ಸ್ ಪ್ರತಿ (ಎಲ್ಲಾ ಸೆಮಿಸ್ಟರ್‌ಗಳ ಅಂಕಪಟ್ಟಿ), ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಹಾಗೂ ಆನ್‌ಲೈನ್ ಮೂಲಕ ಸಲ್ಲಿಸಲಾದ ಅರ್ಜಿಯನ್ನು ಡೌನ್ಲೋಡ್ ಮಾಡಿ ಕಾಲೇಜು ಪ್ರಾಂಶುಪಾಲರ ಸಹಿ ಹಾಗೂ ಮೊಹರಿನೊಂದಿಗೆ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಛೇರಿ ಅಥವಾ ಜಿಲ್ಲೆಯ ಆಯಾ ತಾಲ್ಲೂಕು ಸಹಾಯಕ ನಿರ್ದೇಶಕರುಗಳ ಕಛೇರಿಗೆ ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.