ಮೈಸೂರು: ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಅಡಿಯಲ್ಲಿ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಾದ ಬೆಂಗಳೂರು, ಮೈಸೂರು ವಿಭಾಗದ ಮಂಗಳೂರು, ಬೆಳಗಾವಿ ವಿಭಾಗದ ಧಾರವಾಡ ಮತ್ತು ಕಲಬುರಗಿ ವಿಭಾಗಗಳಲ್ಲಿ ಆರು ತಿಂಗಳ ಅವಧಿಯ ಗ್ರಂಥಾಲಯ ವಿಜ್ಞಾನ ತರಬೇತಿ ಶಾಲೆಗಳನ್ನು ನಡೆಸಲಾಗುತ್ತಿದ್ದು, ಪಿ.ಯು.ಸಿ ಪರೀಕ್ಷೆಯಲ್ಲಿ ಕನಿಷ್ಠ ಶೇಕಡ 40ರಷ್ಟು ಎಸ್.ಸಿ/ಎಸ್.ಟಿಗೆ ಶೇಕಡ 35ರಷ್ಟು ಅಂಕ ಪಡೆದ ಅಭ್ಯರ್ಥಿಗಳು ಈ ತರಬೇತಿಗೆ ಅರ್ಹರಾಗಿರುತ್ತಾರೆ.
ಹಾಲಿ ಕಾರ್ಯನಿರ್ವಹಿಸುತ್ತಿರುವ ಇಲಾಖೆಯ ‘ಡಿ' ದರ್ಜೆಯ ಗ್ರಂಥಾಲಯ ಸಹವರ್ತಿಗಳು ಸಂಬoಧಪಟ್ಟ ಉಪನಿರ್ದೇಶಕರು/ಮುಖ್ಯ ಗ್ರಂಥಾಲಯಾಧಿಕಾರಿಗಳ ಮುಖಾಂತರ ಗ್ರಾಮ ಪಂಚಾಯತಿ ಗ್ರಂಥಾಲಯ ಮೇಲ್ವಿಚಾರಕರು ಸಂಬoಧಪಟ್ಟ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಮುಖಾಂತರ ಹಾಗೂ ಇತರೆ ಸಂಸ್ಥೆಯಿoದ ಬರುವ ಅಭ್ಯರ್ಥಿಗಳು ತಮ್ಮ ಸಂಸ್ಥೆಯ ಮುಖ್ಯಸ್ಥರ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯ ಜೊತೆಗೆ ಪಿ.ಯು.ಸಿ ಅಂಕಪಟ್ಟಿ, ಜಾತಿ ಪ್ರಮಾಣಪತ್ರ, ಸೇವೆಗೆ ಸೇರಿದ ದಿನಾಂಕ, ವೇತನ ಪ್ರಮಾಣ ಪತ್ರ, ನಡವಳಿಕೆ ಪ್ರಮಾಣ ಪತ್ರಗಳ ನಕಲು ಪ್ರತಿಗಳನ್ನು ಲಗತ್ತಿಸಬೇಕು.
ಸಾಮಾನ್ಯ ಅಭ್ಯರ್ಥಿಗಳು ಪಿಯುಸಿ ಅಂಕಪಟ್ಟಿ, ಜಾತಿ ,ಕನ್ನಡ ಮಾಧ್ಯಮ/ಗ್ರಾಮೀಣ/ಮಹಿಳೆ/ಮಾಜಿ ಸೈನಿಕ/371 ಎ ಪ್ರಮಾಣ ಪತ್ರಗಳ ದೃಡೀಕೃತ ನಕಲು ಪ್ರತಿಗಳನ್ನು ಸಲ್ಲಿಸಬೇಕು. ಅರ್ಜಿಗಳನ್ನು ಸಲ್ಲಿಸಲು ಜುಲೈ 19 ಕೊನೆಯ ದಿನವಾಗಿದೆ.
ಹೆಚ್ಚಿನ ವಿವರಗಳಿಗಾಗಿ ಮಂಗಳೂರಿನ ಬಾವುಟಗಡ್ಡೆಯ ನಗರ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರ ಕಛೇರಿಯ ದೂ.ಸಂ: 0824-2425873, ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿರುವ ರಾಜ್ಯ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರ ಕಛೇರಿಯ ದೂ.ಸಂ: 080-22212128, ಧಾರವಾಡದ ಡಿ.ಸಿ.ಕಛೇರಿಯ ಆವರಣದಲ್ಲಿರುವ ಉಪನಿರ್ದೇಶಕರ ಕಛೇರಿಯ ನಗರ ಕೇಂದ್ರ ಗ್ರಂಥಾಲಯದ ದೂ.ಸಂ: 0836-2442465, ಕಲಬುರಗಿಯ ಜಗತ್ ವೃತ್ತದ ಸೂಪರ್ ಮಾರ್ಕೆಟ್‌ನ ಎಂ.ವಿ.ಎಚ್.ಎಸ್ ಶಾಲೆ ಆವರಣದಲ್ಲಿರುವ ಉಪನಿರ್ದೇಶಕರ ಕಛೇರಿಯ ನಗರ ಕೇಂದ್ರ ಗ್ರಂಥಾಲಯದ ದೂ.ಸಂ: 08472-221543 ಅನ್ನು ಸಂಪರ್ಕಿಸಬಹುದು ಎಂದು ಮೈಸೂರು ನಗರ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.