ಕೋಲಾರ: ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಅವರನ್ನು ಜೆಡಿಎಸ್ಗೆ ಸೇರ್ಪಡೆ ಮಾಡಿಕೊಂಡು ಕೋಲಾರ-ಚಿಕ್ಕಬಳ್ಳಾಪುರ ಉಸ್ತುವಾರಿ ನೀಡಲು ವರಿಷ್ಠರಾದ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ
ಎಚ್. ಡಿ.ಕುಮಾರಸ್ವಾಮಿ ಮುಕ್ತ ಆಹ್ವಾನ ನೀಡಿರುವುದಾಗಿ ನನ್ನ ಬಳಿ ಹೇಳಿದ್ದಾರೆ ಎಂದು ಜಿಲ್ಲಾಧ್ಯಕ್ಷರೂ ಆದ ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.
ಈ ಕುರಿತು ಭಾನುವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ಗೋವಿಂದಗೌಡರು ಈ ಮೊದಲು ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷರಾಗಿದ್ದರು. ಮೊದಲ ಬಾರಿಗೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಲು ಜೆಡಿಎಸ್ ಕಾರಣವಾಗಿತ್ತು. ಬಳಿಕ ಕೆಲವು ರಾಜಕೀಯ ಬದಲಾವಣೆಯಿಂದ ಕಾಂಗ್ರೆಸ್ ಜತೆಗೆ ಗುರುತಿಸಿಕೊಂಡರು. ಆದರೆ ಸದ್ಯದ ರಾಜಕೀಯ ಬೆಳವಣಿಗೆಯಲ್ಲಿ ಅವರನ್ನು ರಾಜಕೀಯವಾಗಿ ಮೂಲೆ ಗುಂಪು ಮಾಡಲು ರಮೇಶ್ಕುಮಾರ್ ಷಡ್ಯಂತ್ರ ರೂಪಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಪರಿಶ್ರಮಕ್ಕೆ ಮೂಲೆಗುಂಪು: 2018ರ ವಿಧಾನಸಭೆ ಚುನಾವಣೆಯಲ್ಲಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಾಂಗ್ರೆಸ್ಗೆ ಹೆಚ್ಚು ಸ್ಥಾನ ಬರಲು ಗೋವಿಂದಗೌಡರು ಶ್ರಮಿಸಿದ್ದರು. ರಮೇಶ್ಕುಮಾರ್ ಸೇರಿದಂತೆ ಇತರ ಶಾಸಕರಿಗೆ ರಾಜಕೀಯ ಪುನರ್ಜನ್ಮ ಕೊಟ್ಟ ಗೋವಿಂದಗೌಡ ಅವರನ್ನು ಇದೇ ತಂಡ ರಾಜಕೀಯವಾಗಿ ಮುಗಿಸುವುದಕ್ಕೆ ಬಿಜೆಪಿಯೊಂದಿಗೆ ಕೈಜೋಡಿಸಿದೆ ಎಂದು ವೆಂಕಟಶಿವಾರೆಡ್ಡಿ ಹೇಳಿದ್ದಾರೆ.
ವಿಧಾನ ಪರಿಷತ್ ಚುನಾವಣೆಯಲ್ಲಿ ಗೋವಿಂದಗೌಡರಿಗೆ ಜೆಡಿಎಸ್ನಿಂದ ಟಿಕೆಟ್ ನೀಡುವುದಕ್ಕೆ ವರಿಷ್ಠರಾದ ಎಚ್.ಡಿ.ದೇವೇಗೌಡರು, ಕುಮಾರಸ್ವಾಮಿ ಸಮ್ಮತಿಸಿದ್ದರು. ಆದರೆ ಕಾಂಗ್ರೆಸ್ನಿಂದಲೇ ಸೀಟು ಕೊಡಿಸುತ್ತಾರೆ ಎಂದು ರಮೇಶ್ಕುಮಾರ್ ನಂಬಿ ಕಾಂಗ್ರೆಸ್ಗೆ ಹೋಗಿದ್ದಕ್ಕೆ ಖೆಡ್ಡಾ ತೋಡಿದರು ಎಂದಿದ್ದಾರೆ.
ಮುಂದಿನ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಪಡೆಯುವುದಕ್ಕೆ ಗೋವಿಂದಗೌಡರು ಪ್ರಬಲ ಆಕಾಂಯಾಗಿದ್ದಾರೆ. ಕಾಂಗ್ರೆಸ್ ಶಾಸಕರ ೇತ್ರದ ಸಿ ಶಕ್ತಿ ಸಂಗಳಿಗೆ ಕೋಟ್ಯಂತರ ರೂಪಾಯಿ ಸಾಲ ವಿತರಣೆ ಮಾಡಿ ಬೆಂಬಲಕ್ಕೆ ನಿಂತಿದ್ದಾರೆ. ಈಗ ಇದೇ ರಮೇಶ್ಕುಮಾರ್ ತಂಡ ಸಿದ್ದರಾಮಯ್ಯ ಅವರನ್ನು ಕೋಲಾರಕ್ಕೆ ಕರೆಸುವ ಮೂಲಕ ಗೋವಿಂದಗೌಡ ಅವರ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಬ್ಯಾಲಹಳ್ಳಿ ಗೋವಿಂದಗೌಡ ಭಾವಚಿತ್ರ