ಬೆಂಗಳೂರು: ಐಪಿಎಸ್ ಅಧಿಕಾರಿಗಳಾದ ಡಿ.ರೂಪಾ ಮತ್ತು ಹೇಮಂತ್ ನಿಂಬಾಳ್ಕರ್ ಅವರನ್ನು ರಾಜ್ಯ ಸರ್ಕಾರ ಎತ್ತಂಗಡಿ ಮಾಡಿದೆ.
ನಿರ್ಭಯಾ ನಿಧಿಯಡಿ ರೂಪಿಸಲಾದ 'ಸುರಕ್ಷಿತ ನಗರ' ಯೋಜನೆಯ ಗುತ್ತಿಗೆಯಲ್ಲಿ ಅಕ್ರಮ ಕುರಿತು ಡಿ.ರೂಪಾ ಮತ್ತು ಹೇಮಂತ್ ನಿಂಬಾಳ್ಕರ್ ನಡುವೆ ಭಾರಿ ಜಟಾಪಟಿಯೇ ನಡೆದಿತ್ತು. ಇದರ ಬೆನ್ನಲ್ಲೇ ಇವರಿಬ್ಬರನ್ನೂ ಸರ್ಕಾರ ವರ್ಗಾವಣೆ ಮಾಡಿದೆ. ಇದನ್ನೂ ಓದಿರಿ ಶರವೇಗದ ರೈಲಿನ ಎದುರು ಧರ್ಮೇಗೌಡ ನಿಂತಿದ್ಹೇಗೆ? ರೈಲು ಚಾಲಕ ಬಾಯ್ಬಿಟ್ಟ ಭಯಾನಕ ಸತ್ಯ
ಗೃಹ ಇಲಾಖೆ ಕಾರ್ಯದರ್ಶಿ ಆಗಿದ್ದ ರೂಪಾ ಅವರನ್ನು ಕರಕುಶಲ ಅಭಿವೃದ್ಧಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾಯಿಸಲಾಗಿದೆ. ಕಾರ್ಯದರ್ಶಿ ಹುದ್ದೆಗೆ ಮಾಲಿನಿ ಕೃಷ್ಣಮೂರ್ತಿ ಅವರನ್ನು ನೇಮಿಸಲಾಗಿದೆ. ಬೆಂಗಳೂರು ಹೆಚ್ಚುವರಿ ಕಮಿಷನರ್(ಆಡಳಿತ) ಆಗಿದ್ದ ಹೇಮಂತ್ ನಿಂಬಾಳ್ಕರ್ ಅವರನ್ನು ಆಂತರಿಕ ಭದ್ರತಾ ವಿಭಾಗಕ್ಕೆ ವರ್ಗಾಯಿಸಲಾಗಿದೆ. ರೂಪಾ ಮತ್ತು ನಿಂಬಾಳ್ಕರ್ ಅವರ ಜತೆಗೆ ಇನ್ನೂ ಕೆಲವರನ್ನು ವರ್ಗಾವಣೆ ಮಾಡಲಾಗಿದೆ.
ನಿರ್ಭಯಾ ನಿಧಿಯ ಮಹಿಳಾ ಸುರಕ್ಷತಾ ಯೋಜನೆ ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿಬಂದಿದ್ದರಿಂದ ತನಿಖೆ ನಡೆಸುವಂತೆ ಸರ್ಕಾರ ಆದೇಶಿಸಿದೆ. ಈ ಬಗ್ಗೆ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.