ನ್ಯೂಸ್

ಬಸ್ ಮತ್ತು ಕಾರು ಮಧ್ಯೆ ಡಿಕ್ಕಿ: ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ವೇನಲ್ಲಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವು..accident

ಬೆಂಗಳೂರು: ( accident ) ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ  ಐರಾವತ ಬಸ್ ಮತ್ತು ಕಾರು ಮಧ್ಯೆ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಐರಾವತ ಬಸ್ ಡಿಕ್ಕಿ ರಭಸಕ್ಕೆ ಟಾಟಾ ಪಂಚ್​ ಕಾರು (KA 09, MG 4263) ಸಂಪೂರ್ಣ ನಜ್ಜುಗುಜ್ಜಾಗಿದೆ.  ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಸತ್ಯಾನಂದ ರಾಜೇ ಆರಸ್ (51) ಅವರ ಪತ್ನಿ ನಿಶ್ಚಿತಾ (45), ಚಂದ್ರು(62) ಅವರ ಪತ್ನಿ ಸುವೇದಿನಿ ರಾಣಿ(50) ಮೃತರು. ಮೃತಪಟ್ಟರು ಬೆಂಗಳೂರಿನ ಜೆ.ಪಿ.ನಗರದ ಒಂದೇ ಕುಟುಂಬದವರು ಎಂದು ತಿಳಿದುಬಂದಿದೆ.

ಪಿರಿಯಾಪಟ್ಟಣ ತಾಲೂಕಿನ ಸಿಗೂರು ಗ್ರಾಮದಲ್ಲಿ ಸತ್ಯಾನಂದರಾಜೇ ಅರಸ್ ಅವರ ಮಾವ ತೀರಿ ಹೋಗಿದ್ದರು. ಹೀಗಾಗಿ ಅಂತ್ಯಕ್ರಿಯೆಗೆಂದು ಅರಸ್ ಕುಟುಂಬ ಕಾರಿನಲ್ಲಿ ಬೆಂಗಳೂರಿನಿಂದ ಪಿರಿಯಾಪಟ್ಟಣ ತಾಲೂಕಿನ ಸಿಗೂರು ಗ್ರಾಮಕ್ಕೆ ಹೋಗುತ್ತಿದ್ದರು. ಈ ದುರ್ಘಟನೆ ಸಂಭವಿಸಿದೆ.

ಮಂಡ್ಯ ತಾಲೂಕಿನ ತೂಬಿನಕೆರೆ ಬಳಿ ಈ ದುರ್ಘಟನೆ ನಡೆದಿದೆ. ಕಾರು ಚಾಲಕನ ಅಜಾಗರೂಕತೆಯಿಂದ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.