ಬೆಂಗಳೂರು: ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿ (ಐಸಿಸಿ) ರಚಿಸಿ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ. ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಸಮಿತಿಯ ಅಧ್ಯಕ್ಷರಾಗಿದ್ದಾರೆ.
ಸಮಿತಿಯಲ್ಲಿ ಬಳ್ಳಾರಿ, ಕೊಪ್ಪಳ, ರಾಯಚೂರು ಹಾಗೂ ವಿಜಯನಗರ ಜಿಲ್ಲೆಯ ಜಿಲ್ಲಾಧಿಕಾರಿಗಳು ಸೇರಿ ಏಳು ಮಂದಿ ಸದಸ್ಯರಿದ್ದಾರೆ.
ರಾಯಚೂರು, ಬಳ್ಳಾರಿ, ವಿಜಯನಗರ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವರಾದ ಕ್ರಮವಾಗಿ ಡಾ.ಶರಣಪ್ರಕಾಶ ಪಾಟೀಲ್ , ಬಿ.ನಾಗೇಂದ್ರ ಹಾಗೂ ಜಮೀರ್ ಅಹಮದ್ ಖಾನ್ ಸೇರಿದಂತೆ ಈ ನಾಲ್ಕು ಜಿಲ್ಲೆಯ ಲೋಕಸಭಾ ಸದಸ್ಯರು, ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ವಿಶೇಷ ಆಹ್ವಾನಿತರಾಗಿದ್ದಾರೆ.