ಮೈಸೂರು: ಸಾಗರ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲು ಮಾಡಿರುವುದನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸಮರ್ಥಿಸಿಕೊಂಡಿದ್ದಾರೆ.
‘‘ಈ ನೆಲದ ಕಾನೂನು ಎಲ್ಲರಿಗೂ ಅನ್ವಯವಾಗುತ್ತದೆ. ಈ ಪ್ರಕರಣದಲ್ಲೂ ಕಾನೂನು ಪ್ರಕಾರ ತನಿಖೆ ನಡೆಯಲಿದೆ. ಆದರೆ, ಕಾಂಗ್ರೆಸ್‌ನವರು ದಿನಕ್ಕೊಂದು ಡಿಮಾಂಡ್ ಮಾಡ್ತಾರೆ’’ ಎಂದು ಹೇಳಿದರು.
‘‘ಯಾವುದೇ ಒಬ್ಬ ವ್ಯಕ್ತಿ ದೂರು ನೀಡಿದರೆ ಕೂಡಲೇ ಎಫ್‌ಐಆರ್ ದಾಖಲಿಸಬೇಕು ಎಂಬುದಾಗಿ ಸುಪ್ರೀಂ ಕೋರ್ಟ್ ಹೇಳಿದೆ. ಆ ಪ್ರಕಾರವೇ ನಮ್ಮ ಅಧಿಕಾರಿಗಳು ಕೆಲಸ ಮಾಡುತ್ತಾರೆ’’ ಎಂದರು.
‘‘ಕಾಂಗ್ರೆಸ್‌ನವರು ಪತ್ರಕರ್ತ ಅರ್ನಬ್ ಗೋಸ್ವಾಮಿ ವಿರುದ್ಧ ದೇಶಾದ್ಯಂತ 1,500ಕ್ಕೂ ಹೆಚ್ಚು ಎಫ್‌ಐಆರ್ ದಾಖಲಿಸಿದ್ದರು. ಆಗ ಈ ನಿಲುವು, ನ್ಯಾಯ ಕಾಂಗ್ರೆಸ್‌ನವರಿಗೆ ಗೊತ್ತಿರಲಿಲ್ಲವೇ? ಈ ದೇಶದ ಕಾನೂನು ಎಲ್ಲರಿಗೂ ಅನ್ವಯವಾಗುತ್ತದೆ. ಹೀಗಾಗಿ, ಕಾನೂನು ತನ್ನ ಕೆಲಸವನ್ನು ಮಾಡುತ್ತದೆ’’ ಎಂದು ಸ್ಪಷ್ಟಪಡಿಸಿದರು.