ನ್ಯೂಸ್

ಶಂಕಿತ ಕರ್ನಾಟಕ ಮೂಲದವನೇ?

ಬೆಂಗಳೂರು: ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಶಂಕಿತ ಕರ್ನಾಟಕ ಮೂಲದವನೇ ಎಂಬ ತೀರ್ಮಾನಕ್ಕೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬಂದಿದೆ.

ಶಂಕಿತನಿಗೆ ಬೆಂಗಳೂರು ಪರಿಚಯ ಚೆನ್ನಾಗಿ ಇತ್ತು. ಆತ ಯಾವ ಸಂಘಟನೆಗೆ ಸೇರಿದವನು ಎಂಬುದು ಸಹ ಎನ್‌ಐಎಗೆ ಬಹುತೇಕ ಗೊತ್ತಾಗಿದೆ. ಶಂಕಿತ ರಾಜ್ಯದ ಅರಣ್ಯ ಪ್ರದೇಶದಲ್ಲಿ ತರಬೇತಿ ನಡೆಸಿರುವ ಬಗ್ಗೆ ಮಾಹಿತಿ ದೊರೆತಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಟ್ರಯಲ್ ಬಾಂಬ್ ಬ್ಲಾಸ್ಟ್ ಮಾಡಿರುವ ಮತ್ತು ಸರ್ವೈವಲ್ ಕ್ಯಾಂಪ್‌ಗಳನ್ನು ನಡೆಸಿರುವ ಬಗ್ಗೆ ತನಿಖೆ ವೇಳೆ ಮಾಹಿತಿ ದೊರೆತಿದೆ ಎಂದೂ ಮೂಲಗಳು ಹೇಳಿವೆ.

ಅರೋಪಿ ಬೆಂಗಳೂರಿಗೆ ಪ್ರವೇಶಿಸಿದ್ದನ್ನು ಕೂಡ ಪೊಲೀಸರು ಪತ್ತೆ ಮಾಡಿದ್ದಾರೆ. ಶಂಕಿತ ಸ್ಫೋಟದ ದಿನವೇ ಬೆಂಗಳೂರು ಬಂದಿದ್ದಾನೆ. ಚೆನ್ನೈಯಿಂದ ತಿರುಪತಿಗೆ ರೈಲಿನಲ್ಲಿ ತೆರಳಿ ಅಲ್ಲಿಂದ ಬಸ್ ಮೂಲಕ ಬಂದಿದ್ದಾನೆ. ಕೆಆರ್‌ಪುರ ಬಸ್ ನಿಲ್ದಾಣದಲ್ಲಿ ಇಳಿದು ನಂತರ ಆತ ಮಹದೇವಪುರದ ಗ್ರಫೇಡ್ ಇಂಡಿಯಾ ಸರ್ಕಲ್ (ಬಸ್ ನಿಲ್ದಾಣ) ಬಂದು ಬಸ್ ಬದಲಾವಣೆ ಮಾಡಿದ್ದಾನೆ. ಬಳಿಕ ಬ್ರೂಕ್ ಫೀಲ್ಡ್ ಕಡೆಗಿನ ಬಸ್ ಏರಿ ರಾಮೇಶ್ವರ ಕೆಫೆಗೆ ಆಗಮಿಸಿದ್ದಾನೆ ಎಂಬುದು ಈವರೆಗಿನ ತನಿಖೆಯಿಂದ ಗೊತ್ತಾಗಿದೆ ಎನ್ನಲಾಗಿದೆ.

ಈ ಹಿಂದೆ ಬಾಂಬ್ ಅನ್ನು ಕುಕ್ಕರ್ ಮತ್ತು ಸ್ಟೀಲ್ ಬಾಕ್ಸ್‌ನಲ್ಲಿ ಮಾಡಲಾಗುತ್ತಿತ್ತು. ಆದರೆ, ಶಂಕಿತನು ಅತ್ಯಾಧುನಿಕವಾಗಿ ಸಿಲ್ವರ್ ಪೇಪರ್ ಮತ್ತು ಬ್ಯಾಗ್ ಮೂಲಕ ಸಿದ್ಧಪಡಿಸಿರುವ ಬಗ್ಗೆಯೂ ತನಿಖಾಧಿಕಾರಿಗಳಿಗೆ ಮಾಹಿತಿ ದೊರೆತಿದೆ. ಶಂಕಿತ ಸಂಚಾರಕ್ಕೆ ನೇರ ಮಾರ್ಗಗಳನ್ನು ಬಳಸದೇ ಸುತ್ತಿ ಬಳಸಿ ಬಂದು, ಮತ್ತೆ ನೂರಾರು ಕಿಲೋಮೀಟರ್ ಸುತ್ತಾಡಿಕೊಂಡು ಆತನ ರಹಸ್ಯ ತಾಣ ಸೇರಿರುವ ಸಾಧ್ಯತೆ ಇದೆ. ಸದ್ಯ ಕರ್ನಾಟಕ, ತೆಲಂಗಾಣ ಮತ್ತು ತಮಿಳುನಾಡಿನ ಹಲವಾರು ಭಾಗದಲ್ಲಿ ಶಂಕಿತನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

೮೦೦ ಸಿಸಿ ಕ್ಯಾಮರಾ ಪರಿಶೀಲನೆ:
ಕುಂದಲಹಳ್ಳಿಯಿಂದ ಬಳ್ಳಾರಿವರೆಗೆ ಸುಮಾರು ೮೦೦ಕ್ಕೂ ಹೆಚ್ಚಿನ ಸಿಸಿ ಕ್ಯಾಮರಾಗಳ ದೃಶ್ಯಾವಳಿಯನ್ನು ಸತತ ಮೂರು ದಿನಗಳ ಕಾಲ ಪರಿಶೀಲಿಸಿದಾಗ ಶಂಕಿತನ ಗುರುತು ಪತ್ತೆಯಾಗಿದೆ. ಈ ಪತ್ತೆದಾರಿಕೆಯಲ್ಲಿ ಸಿಸಿಬಿ ಸಾಕಷ್ಟು ಶ್ರಮ ಹಾಕಿದ್ದು ಅಂತಿಮವಾಗಿ ಆತನ ನಿಖರ ಮಾಹಿತಿ ಕಲೆ ಹಾಕಿ ಎನ್‌ಐಎಗೆ ನೀಡಿದೆ ಎಂದು ಮೂಲಗಳು ತಿಳಿಸಿವೆ.
ಕಳೆದ ನಾಲ್ಕು ವರ್ಷ ಅವಧಿಯಲ್ಲಿ ನಡೆದಿರುವ ಮಂಗಳೂರಿನ ದೇಶ ವಿರೋಧಿ ಗೋಡೆ
ಬರಹ ಪ್ರಕರಣ, ಮಂಗಳೂರು ಕುಕ್ಕರ್ ಸ್ಫೋಟ, ಶಿವಮೊಗ್ಗ ಜಿಲ್ಲೆ ತುಂಗಾ ತೀರದಲ್ಲಿ
ಬಾಂಬ್ ಪ್ರಯೋಗಾರ್ಥ ಪರೀಕ್ಷೆ ಪ್ರಕರಣ, ತಮಿಳುನಾಡಿನ ಕೊಯಮತ್ತೂರಿನ ಬಾಂಬ್
ಸ್ಫೋಟ ಹಾಗೂ ರಾಮೇಶ್ವರಂ ಕೆೆ ಬಾಂಬ್ ಸ್ಫೋಟ ಪ್ರಕರಣಗಳಿಗೆ ಪರಸ್ಪರ ನಂಟಿದೆ.
ಈಗ ಕೆೆ ಸ್ಫೋಟದಲ್ಲಿ ಶಂಕಿತ ಪಾತ್ರವಹಿಸಿರುವುದು ಪತ್ತೆಯಾಗಿದೆ ಎಂದು ಮೂಲಗಳು ಹೇಳಿವೆ.
ಮಂಗಳೂರು ಕುಕ್ಕರ್ ಸ್ಫೋಟ ಹಾಗೂ ಶಿವಮೊಗ್ಗ ಜಿಲ್ಲೆ ಬಾಂಬ್ ಪ್ರಯೋಗಾರ್ಥ ಸ್ಫೋಟದಲ್ಲಿ ಪತ್ತೆಯಾಗಿದ್ದ ಸ್ಫೋಟಕ ವಸ್ತುಗಳಿಗೂ ರಾಮೇಶ್ವರ ಕೆೆ ಸ್ಫೋಟದ ಬಾಂಬ್ ತಯಾರಿಕೆಗೆ ಬಳಸಲಾಗಿದ್ದ ವಸ್ತುಗಳಿಗೂ ತಾಳೆಯಾಗಿದೆ. ಹೀಗಾಗಿ ಶಿವಮೊಗ್ಗ ಪ್ರಕರಣದಲ್ಲಿ ತಪ್ಪಿಸಿಕೊಂಡಿದ್ದ ಪ್ರಮುಖ ಹ್ಯಾಂಡ್ಲರ್‌ಗಳೇ ಕೆೆ ಕೃತ್ಯದಲ್ಲಿ ಪಾತ್ರವಹಿಸಿರುವ ಶಂಕೆ ವ್ಯಕ್ತವಾಗಿದೆ.