ನ್ಯೂಸ್

ಬಿಜೆಪಿಯ ಈ ನಿರ್ಧಾರ ರಾಜಕೀಯ ಪ್ರೇರಿತ ಎಂದಿದ್ದೇಕೆ ಬಿಎಸ್​ಪಿ ಮುಖ್ಯಸ್ಥೆ ಮಾಯಾವತಿ

ಡೆಹ್ರಾಡೂನ್: ಸರ್ಕಾರಿ ನೌಕರರು ರಾಷ್ಟ್ರೀಯ ಸ್ವಯಂಸೇವಕ ಸಂಘದ(ಆರ್​ಎಸ್​ಎಸ್​) ಚಟುವಟಿಕೆಗಳಲ್ಲಿ ಭಾಗವಹಿಸುವಿಕೆಯ ಮೇಲಿನ ನಿಷೇಧವನ್ನು ತೆಗೆದುಹಾಕುವ ಕೇಂದ್ರ ಸರ್ಕಾರದ ಆದೇಶವು ರಾಜಕೀಯ ಪ್ರೇರಿತ ಎಂದು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಬಣ್ಣಿಸಿದ್ದಾರೆ.

ಸಂಘದ ಜನರನ್ನು ಸಮಾಧಾನಪಡಿಸುವುದು ಹಾಗೂ ಲೋಕಸಭೆ ಚುನಾವಣೆಯ ನಂತರ ಬಿಜೆಪಿ ಮತ್ತು ಆರ್‌ಎಸ್‌ಎಸ್ ನಡುವಿನ ಅಂತರವನ್ನು ಕಡಿಮೆ ಮಾಡುವುದು ಈ ನಿರ್ಧಾರದ ಹಿಂದಿನ ಉದ್ದೇಶವಾಗಿದೆ. ಕೂಡಲೇ ಆದೇಶ ಹಿಂಪಡೆಯಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಸರ್ಕಾರಿ ನೌಕರರು ಸಂವಿಧಾನ ಮತ್ತು ಕಾನೂನಿನ ವ್ಯಾಪ್ತಿಯಲ್ಲಿ ಸಾರ್ವಜನಿಕ ಹಿತಾಸಕ್ತಿ ಮತ್ತು ಕಲ್ಯಾಣಕ್ಕಾಗಿ ನಿಷ್ಪಕ್ಷಪಾತವಾಗಿ ಕೆಲಸ ಮಾಡಬೇಕಾಗುತ್ತದೆ. ಆದರೆ ಅನೇಕ ಬಾರಿ ನಿಷೇಧಕ್ಕೊಳಗಾದ ಆರ್‌ಎಸ್‌ಎಸ್‌ನ ಚಟುವಟಿಕೆಗಳು ಒಂದು ನಿರ್ದಿಷ್ಟ ಪಕ್ಷಕ್ಕೆ ರಾಜಕೀಯ ಮಾತ್ರವಲ್ಲದೆ ಚುನಾವಣೆಯೂ ಆಗಿದೆ. ಅಂತಹ ಪರಿಸ್ಥಿತಿಯಲ್ಲಿ ಈ ನಿರ್ಧಾರವು ಸೂಕ್ತವಲ್ಲ ಮತ್ತು ತಕ್ಷಣವೇ ಹಿಂತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.

ಕಳೆದ ವಾರ ಹೊರಡಿಸಿದ ಸರ್ಕಾರಿ ಆದೇಶವು ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕರ ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸುವ ಮೇಲಿನ ನಿಷೇಧವನ್ನು ತೆಗೆದುಹಾಕಿದೆ ಎಂದು ಕಾಂಗ್ರೆಸ್ ಭಾನುವಾರ ಹೇಳಿದೆ. (ಏಜೆನ್ಸೀಸ್​​)