ನ್ಯೂಸ್

ಖರ್ಗೆ ಕುಟುಂಬ ಸಿಎಂ ಹಾದಿ ತುಳಿದಿರುವುದು ಸಾಬೀತು; ಬಿ.ವೈ.ವಿಜಯೇಂದ್ರ ವಿಶ್ಲೇಷಣೆ

ಬೆಂಗಳೂರು: ಖರ್ಗೆಯವರ ಕುಟುಂಬದ ಸಿದ್ದಾರ್ಥ ಟ್ರಸ್ಟ್ಗೆ ಕೆಐಎಡಿಬಿಯಿಂದ ಮಂಜೂರಾಗಿದ್ದ 5 ಎಕರೆ ಸಿಎ ನಿವೇಶನವನ್ನು ಬೇಷರತ್ ಹಿಂದಿರುಗಿಸಿರುವ ನಿಲುವು ಗಮನಿಸಿದರೆ ಅಕ್ರಮ ಮಂಜೂರಾತಿ ಪ್ರಕರಣ ನ್ಯಾಯಾಲಯದ ಮೆಟ್ಟಿಲು ಏರುವ ಮುನ್ನ ಖರ್ಗೆ ಕುಟುಂಬ ಮುಡಾ ಹಗರಣದ ರೂವಾರಿ ಸಿದ್ದರಾಮಯ್ಯನವರ ಹಾದಿಯನ್ನೇ ತುಳಿದಿರುವುದು ಸಾಬೀತಾಗುತ್ತಿದೆ ಎಂದು ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟ ಹಗರಣಗಳಲ್ಲಿ ಭಾಗಿಯಾದವರು ಬಿಜೆಪಿ ನಡೆಸುತ್ತಿರುವ ಹೋರಾಟಗಳಿಗೆ ಮಣಿಯುತ್ತಿರುವುದರ ನಿದರ್ಶನವೂ ಇದಾಗಿದೆ ಎಂದು ವಿಶ್ಲೇಷಿಸಿದ್ದಾರೆ.
ಕಾಂಗ್ರೆಸ್ ಸರ್ಕಾರದ ಸರಣಿ ಭ್ರಷ್ಟಾಚಾರಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಸೇರಿದಂತೆ ಭಾಗಿಯಾಗಿರುವ ಅನೇಕರು ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎನ್ನುವುದನ್ನು ಕಾಲವೇ ಉತ್ತರ ಹೇಳಲಿದೆ. ಆಮಿಷಗಳನ್ನು ಒಡ್ಡಿ ಅಧಿಕಾರಕ್ಕೆ ಬಂದು ಲೂಟಿಯನ್ನೇ ಗುರಿಯಾಗಿಸಿಕೊಂಡಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರ ತೊಲಗಿಸುವ ವರೆಗೂ ಬಿಜೆಪಿ ನಿರಂತರ ಹೋರಾಟ ನಡೆಸಲಿದೆ ಎಂದು ಹೇಳಿದ್ದಾರೆ.