ನ್ಯೂಸ್

ಮಾಜಿ ಎಂಎಲ್​ಸಿ ಗಾಯತ್ರಿ ಶಾಂತೇಗೌಡರ ಮನೆ ಮೇಲೆ ಬೆಳ್ಳಂಬೆಳಗ್ಗೆ ಐಟಿ ದಾಳಿ

ಚಿಕ್ಕಮಗಳೂರು: ಮಾಜಿ ಎಂಎಲ್​ಸಿ ಗಾಯತ್ರಿ ಶಾಂತೇಗೌಡ ಅವರ ಮನೆ ಇಂದು(ಗುರುವಾರ) ಬೆಳ್ಳಂಬೆಳಗ್ಗೆ ಐಟಿ ದಾಳಿಯಾಗಿದೆ.

ನಗರದ ಹೂವಿನ ಮಾರ್ಕೆಟ್ ರಸ್ತೆಯಲ್ಲಿರುವ ಗಾಯತ್ರಿ ಅವರ ನಿವಾಸ, ಬೇಲೂರಿನಲ್ಲಿ ಅಳಿಯನ ಮನೆ ಮೇಲೂ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

10ಕ್ಕೂ ಹೆಚ್ಚು ವಾಹನದಲ್ಲಿ ಆಗಮಿಸಿದ ಐಟಿ ಅಧಿಕಾರಿಗಳು ಮಹತ್ವದ ದಾಖಲೆಗಳಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ. ಯಾರಿಗೂ ಅನುಮಾನ ಬಾರದಿರಲೆಂದು ಕಾರಿನ ಮುಂಭಾಗ 'ಅಭಿನವ್ weds ದೀಪಿಕಾ' ಎಂದು ಮದುವೆಯ ಬೋರ್ಡ್ ಹಾಕಿಕೊಂಡು ಅಧಿಕಾರಿಗಳು ಬಂದಿದ್ದಾರೆ.