ಬೆಂಗಳೂರು: ಬೆಂಗಳೂರಿನ ಮೇಘನಾ ಫುಡ್ಸ್ ಗ್ರೂಪ್ ಸಂಸ್ಥೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದು, ನಗರದ 10ಕ್ಕೂ ಹೆಚ್ಚು ಕಡೆ ರೇಡ್ ಮಾಡಿದ್ದಾರೆ. ಬೆಂಗಳೂರು ಮತ್ತು ಹೈದರಾಬಾದ್ ನಗರಗಳಲ್ಲಿ ಹೆಚ್ಚು ಹೆಸರುವಾಸಿಯಾದ ಮೇಘನಾ ಫುಡ್ಸ್, ತನ್ನ ಹೋಟೆಲ್ ಮತ್ತು ರೆಸ್ಟೋರೆಂಟ್ಗಳನ್ನು ಬೆಂಗಳೂರಿನ ಕೋರಮಂಗಲ, ಇಂದಿರಾನಗರ, ಜಯನಗರದಲ್ಲಿರುವ ಶಾಖೆಗಳನ್ನು ನಡೆಸುತ್ತಿವೆ.
ಇದನ್ನೂ ಓದಿ: ರಸ್ತೆ ಅಪಘಾತದ ನಂತರ ವೆಂಟಿಲೇಟರ್ನಲ್ಲಿರುವ ಅರುಂಧತಿ ನಾಯರ್; ನಟಿಯ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಸಹೋದರಿ
ಪ್ರಸ್ತುತ ಬೆಂಗಳೂರು ಮತ್ತು ಹೈದರಾಬಾದ್ನಲ್ಲಿ ಹೆಚ್ಚು ಜನಪ್ರಿಯತೆ ಗಳಿಸಿರುವ ಮೇಘನಾ ಫುಡ್ಸ್ ಕಂಪನಿಗೆ ಸಂಬಂಧಿಸಿದ 10ಕ್ಕೂ ಹೆಚ್ಚು ಕಡೆ ಇದೀಗ ಆದಾಯ ತೆರಿಗೆ ಇಲಾಖೆ (IT) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಾಯ ತೆರಿಗೆ ಪಾವತಿಯಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಸದ್ಯ ಐಟಿ ಅಧಿಕಾರಿಗಳು ದಾಳಿ ಕೈಗೊಂಡಿದ್ದಾರೆ. ಅಧಿಕಾರಿಗಳು ಕರ್ನಾಟಕ ಮತ್ತು ಗೋವಾ ವಿಭಾಗದಿಂದ ಆಗಮಿಸಿದ್ದಾರೆ ಎಂದು ವರದಿಯಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.