ಬೆಂಗಳೂರು; ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (ಬಿಎಂಆರ್‌ಸಿಎಲ್)ನ ನೂತನ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಐಎಎಸ್ ಅಧಿಕಾರಿ ಡಾ. ಜೆ. ರವಿಶಂಕರ್ ಅವರನ್ನು ನೇಮಿಸಿ ಸರ್ಕಾರ ಶುಕ್ರವಾರ (18) ಆದೇಶ ಹೊರಡಿಸಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (bbmp) ಮುಖ್ಯ ಆಯುಕ್ತರಾಗಿರುವ ಮಹೇಶ್ವರ ರಾವ್ ಅವರು ಬಿಎಂಆರ್‌ಸಿಎಲ್‌ನ ಹೆಚ್ಚುವರಿ ಜವಾಬ್ದಾರಿ ಹೊಂದಿದ್ದರು. ಕೇಂದ್ರದಿಂದ ಅನುಮೋದನೆ ಪಡೆದ ಬಳಿಕ ಮಹೇಶ್ವರ ರಾವ್ ಅವರನ್ನು 2024ರ ಜನವರಿಯಲ್ಲಿ ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್‌ನ ಪೂರ್ಣಾವಧಿ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಿಸಲಾಯಿತು. ನಂತರ ಸರ್ಕಾರ 2025ರ ಏಪ್ರಿಲ್‌ನಲ್ಲಿ ಅವರನ್ನು ಬಿಬಿಎಂಪಿ ಮುಖ್ಯ ಆಯುಕ್ತರನ್ನಾಗಿ ನೇಮಕ ಮಾಡಿತು.
ರವಿಶಂಕರ್ ರಾಜ್ಯ ಕೃಷಿ ಇಲಾಖೆಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್‌ನಲ್ಲಿ ಉನ್ನತ ಹುದ್ದೆಗೆ ನೇಮಕವಾದ ಅವರಿಗೆ, ಹಳದಿ ಮಾರ್ಗದಲ್ಲಿ ಶೀಘ್ರ ವಾಣಿಜ್ಯ ಸಂಚಾರ ಆರಂಭಿಸುವುದು ಮತ್ತು ಹೆಬ್ಬಾಳ ಡಿಪೋ ನಿರ್ಮಾಣ ಸ್ಥಾಪನೆಯಂತಹ ಮಹತ್ವದ ಜವಾಬ್ದಾರಿಯನ್ನು ಇವರು ನಿರ್ವಹಿಸಬೇಕಿದೆ.
(ಏಜೆನ್ಸೀಸ್)
ಹಾಗಾಗಿ ಬಿಎಂಆರ್‌ಸಿಎಲ್‌ನ ವ್ಯವಸ್ಥಾಪಕ ಹುದ್ದೆಯನ್ನು ಹೆಚ್ಚುವರಿಯಾಗಿ ಹೊಂದಿದ್ದ ಮಹೇಶ್ವರ್ ರಾವ್ ಅವರನ್ನು ಹುದ್ದೆಯಿಂದ ಬಿಡುಗಡೆ ಮಾಡಿ, ಕೃಷಿ ಇಲಾಖೆ ಕಾರ್ಯದರ್ಶಿಯಾಗಿದ್ದ ರವಿಶಂಕರ್ ಅವರನ್ನು ನೇಮಕ ಮಾಡಲಾಗಿದೆ.