ನ್ಯೂಸ್

ಹಣ ಅಕ್ರಮ ವರ್ಗಾವಣೆ ಸುಳಿಯಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್‌; ಐದು ಗಂಟೆಗಳಿಂದ ನಡೆಯುತ್ತಿದೆ ತೀವ್ರ ವಿಚಾರಣೆ

ನವದೆಹಲಿ: ಅಕ್ರಮವಾಗಿ ಹಣ ವರ್ಗಾವಣೆ ನಡೆಸಿರುವ ಪ್ರಕರಣದ ಸುಳಿಗೆ ಸಿಲುಕಿರುವ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಇದೀಗ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತೀವ್ರ ವಿಚಾರಣೆ ಎದುರಿಸುತ್ತಿದ್ದಾರೆ.

ದೆಹಲಿಯಲ್ಲಿರುವ ಜಾರಿ ‌ನಿರ್ದೇಶನಾಲಯದ ಕಚೇರಿಗೆ ಆಗಮಿಸಿರುವ ಅವರು ಐವರು ಸುಮಾರು ಐದು ಗಂಟೆಗಳಿಂದ ಅಧಿಕಾರಿಗಳ ಪ್ರಶ್ನೆಗಳನ್ನು ಎದುರಿಸುತ್ತಿದ್ದು ತೀವ್ರ ವಿಚಾರಣೆಗೆ ಒಳಗಾಗಿದ್ದಾರೆ.

ವಿಚಾರಣೆ ಇನ್ನೂ ಮುಂದುವರಿದಿದ್ದು, ಪ್ರಕರಣದ ಕುರಿತಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬೀಳಬೇಕಿದೆ. ಜಾರಿ ನಿರ್ದೇಶನಾಲಯದ ಕಚೇರಿಯಿಂದ ಹೊರಬಂದ ಬಳಿಕ ಜಾಕ್ವೆಲಿನ್ ಏನು‌ ಪ್ರತಿಕ್ರಿಯೆ ನೀಡಲಿದ್ದಾರೆ ಎಂಬ ಬಗ್ಗೆ ಜಾಕ್ವೆಲಿನ್ ಅಭಿಮಾನಿಗಳಷ್ಟೇ ಅಲ್ಲದೆ ಬಾಲಿವುಡ್ ಮಂದಿ ಎದುರು ನೋಡುತ್ತಿದ್ದಾರೆ. (ಏಜೆನ್ಸೀಸ್​)