ರಾಜಸ್ಥಾನ ಪ್ರೀಮಿಯರ್ ಲೀಗ್ ಉದ್ಘಾಟನೆ ಆಗಿದೆ. ಈ ವೇಳೆ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ಭರ್ಜರಿ ಹೆಜ್ಜೆ ಹಾಕಿದ್ದಾರೆ. ಈ ವಿಡಿಯೋ ಹಾಗೂ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.
ಜಾಕ್ವೆಲಿನ್ ಫರ್ನಾಂಡಿಸ್ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಾಗೂ ವಿಡಿಯೋ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ನಟಿಯ ಗ್ಲಾಮರ್ನ ಹಾಡಿ ಹೊಗಳಿದ್ದಾರೆ.
ಜಾಕ್ವೆಲಿನ್ ಫರ್ನಾಂಡಿಸ್ ಅವರು ಶ್ರೀಲಂಕಾ ಮೂಲದವರು. ಅವರು ಭಾರತಕ್ಕೆ ಬಂದು ಸೆಟಲ್ ಆಗಿದ್ದಾರೆ. ಬಾಲಿವುಡ್ ಅವರ ವೃತ್ತಿ ಜೀವನದ ದಿಕ್ಕನ್ನು ಬದಲಿಸಿದೆ. ಹಲವು ಸೂಪರ್ ಹಿಟ್ ಚಿತ್ರಗಳಲ್ಲಿ ನಟಿಸಿ ಫೇಮಸ್ ಆಗಿದ್ದಾರೆ.
ಜಾಕ್ವೆಲಿನ್ ಫರ್ನಾಂಡಿಸ್ ಅದ್ಭುತವಾಗಿ ಮಾಡುತ್ತಾರೆ. ಈ ಕಾರಣಕ್ಕೆ ಅವರು ಅನೇಕರಿಗೆ ಇಷ್ಟವಾಗುತ್ತಾರೆ. ಜಾಕ್ವೆಲಿನ್ಗೆ ಇನ್ಸ್ಟಾಗ್ರಾಮ್ನಲ್ಲಿ 6.7 ಕೋಟಿ ಹಿಂಬಾಲಕರಿದ್ದಾರೆ.
ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾ 2022ರಲ್ಲಿ ರಿಲೀಸ್ ಆಯಿತು. ಈ ಸಿನಿಮಾದ ‘ರಕ್ಕಮ್ಮ..’ ಹಾಡಿನಲ್ಲಿ ಜಾಕ್ವೆಲಿನ್ ಅವರು ಹೆಜ್ಜೆ ಹಾಕಿ ಗಮನ ಸೆಳೆದರು.