ನ್ಯೂಸ್

ಈ ದಿನ ರಿಲೀಸ್​ ಆಗಲಿದೆಯಾ ತಲೈವಾ ಅಭಿನಯದ 'ಜೈಲರ್' ಚಿತ್ರದ ಟ್ರೇಲರ್?

ಮೋಹನ್​ ಶೆಟ್ಟಿ

ತಮಿಳುನಾಡು: ಟಾಲಿವುಡ್​ನ ಸೂಪರ್‌ಸ್ಟಾರ್, ತಲೈವಾ ರಜನಿಕಾಂತ್ ನಟನೆಯ ಬಹುನಿರೀಕ್ಷಿತ 'ಜೈಲರ್' ಚಿತ್ರ​ ಆಗಸ್ಟ್ 10, 2023 ರಂದು ಬಹುತೇಕ ಚಿತ್ರಮಂದಿರಗಳಲ್ಲಿ ಬಿಡುಗಡೆಗೊಳ್ಳಲು ಸಜ್ಜಾಗಿದೆ. ಈ ನಡುವೆ ಇದೀಗ ಚಿತ್ರತಂಡ ಸಿನಿಮಾದ ಟ್ರೇಲರ್​ ಅನ್ನು ಆಗಸ್ಟ್​ 02 ರಂದು ರಿಲೀಸ್​ ಮಾಡಲಿದೆ ಎಂಬ ಸುದ್ದಿ ಚಿತ್ರರಂಗದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದಲ್ಲಿ ಮೂಡಿಬಂದಿರುವ 'ಜೈಲರ್' ಚಿತ್ರದಲ್ಲಿ ರಜನಿಕಾಂತ್​ ಅವರನ್ನು ಮತ್ತೊಮ್ಮೆ ತೆರೆಯ ಮೇಲೆ ನೋಡಲು ಅಭಿಮಾನಿಗಳು ತುದಿಗಾಲಿನಲ್ಲಿ ಕಾಯುತ್ತಿದ್ದು, ಚಿತ್ರದ ರಿಲೀಸ್​ಗೆ ಕಾತರ ವ್ಯಕ್ತಪಡಿಸಿದ್ದಾರೆ.

ಸನ್ ಪಿಕ್ಚರ್ಸ್ ನಿರ್ಮಾಣದ ಈ ಚಿತ್ರದಲ್ಲಿ ತಮನ್ನಾ ಭಾಟಿಯಾ, ರಮ್ಯಾ ಕೃಷ್ಣ, ಮೋಹನ್ ಲಾಲ್, ಜಾಕಿ ಶ್ರಾಫ್, ಶಿವರಾಜಕುಮಾರ್, ಸುನಿಲ್ ಮತ್ತು ಯೋಗಿ ಬಾಬು ಸೇರಿದಂತೆ ಮುಂತಾದ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ,(ಏಜೆನ್ಸೀಸ್).