ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ 
ನ್ಯೂಸ್

ಜೈನಮುನಿ ಹತ್ಯೆ ದಿಗ್ಬ್ರಮೆ ಉಂಟುಮಾಡಿದೆ: ಬಿ.ವೈ.ರಾಘವೇಂದ್ರ ಕಳವಳ

ಶಿವಮೊಗ್ಗ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ನಂದಿಪರ್ವತ ಆಶ್ರಮದ ಜೈನಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಆಗಿರುವುದು ದಿಗ್ಬ್ರಮೆ ಉಂಟುಮಾಡಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಕಳವಳ ವ್ಯಕ್ತಪಡಿಸಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಪ್ಪಿತಸ್ಥರಿಗೆ ಆದಷ್ಟು ಬೇಗ ಕಠಿಣ ಶಿಕ್ಷೆ ದೊರೆಯಬೇಕು. ಮುಂದಿನ ದಿನಗಳಲ್ಲಿ ಇಂತಹ ಕೃತ್ಯಗಳು ನಡೆಯದಂತೆ ಕಠಿಣ ಎಚ್ಚರಿಕೆ ವಹಿಸಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದರು.
ಚಾತುರ್ಮಾಸದ ಸಂದರ್ಭದಲ್ಲಿ ಇಂತಹ ಘೋರ ಕೃತ್ಯ ನಡೆದಿರುವುದು ಸಾರ್ವಜನಿಕರಲ್ಲಿ ಆತಂಕ ಉಂಟುಮಾಡಿದೆ. ಏನೇ ಕಾರಣಗಳಿದ್ದರೂ ಕೊಲೆ ಮಾಡುವುದು ತಪ್ಪು. ಈ ಬಗ್ಗೆ ಪೊಲೀಸ್ ಇಲಾಖೆ ನಿಸ್ಪಾಕ್ಷಪಾತವಾಗಿ ತನಿಖೆ ನಡೆಸಿ ಕೊಲೆ ಮಾಡಿದವರಿಗೆ ತಕ್ಕ ಶಿಕ್ಷೆ ವಿಧಿಸಬೇಕು ಎಂದು ಹೇಳಿದರು.