ನ್ಯೂಸ್

ಜನಗಣತಿ ಆಧಾರದ ಮೇಲೆ ಕ್ಷೇತ್ರ ಪುನರ್ ವಿಂಗಡಣೆಗೆ ವಿರೋಧ

Bengaluru - Political - Shivananda Tagadur

ಬೆಂಗಳೂರು:

2026ರಲ್ಲಿನ ಅಥವಾ ಅದರ ನಂತರ ನಡೆಸುವ ಹೊಸ ಜನಗಣತಿಯ ಆಧಾರದ ಮೇಲೆ ಕ್ಷೇತ್ರ ಪುನರ್ ವಿಂಗಡಣಾ ಪ್ರಕ್ರಿಯೆಯನ್ನು ನಡೆಸಬಾರದೆಂದು ವಿಧಾನ ಪರಿಷತ್‌ನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ನಿರ್ಣಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಜನಸಂಖ್ಯೆಯನ್ನು ಆಧರಿಸಿ ಸ್ಥಾನಗಳ ಸಂಖ್ಯೆಯನ್ನು ಹೆಚ್ಚಿಸುವ ಸಂದರ್ಭದಲ್ಲಿ, ಪ್ರತಿ ರಾಜ್ಯಕ್ಕೆ ಹಂಚಿಕೆ ಮಾಡಬೇಕಾದ ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಮತ್ತು ಪ್ರತಿ ರಾಜ್ಯದ ವಿಧಾನಸಭೆಗೆ ನಿಗದಿಪಡಿಸಬೇಕಾದ ಸ್ಥಾನಗಳ ಒಟ್ಟು ಸಂಖ್ಯೆಯನ್ನು 1971ರ ಜನಗಣತಿಯನ್ನಾಧರಿಸಿ ನಿರ್ಧರಿಸಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯ ಇದಾಗಿದೆ ಎಂದು ಹೇಳಿದರು.