ನ್ಯೂಸ್

ಕಾಂಗ್ರೆಸ್​ ಹಿರಿಯ ಮುಖಂಡ ಜನಾರ್ದನ ಪೂಜಾರಿಯವರಿಗೆ ಕರೊನಾ ಸೋಂಕು; ಖಾಸಗಿ ಆಸ್ಪತ್ರೆಗೆ ದಾಖಲು

ಮಂಗಳೂರು: ಹಿರಿಯ ಕಾಂಗ್ರೆಸ್ ಮುಖಂಡ, ಕೇಂದ್ರ ಮಾಜಿ ಸಚಿವ ಜನಾರ್ದನ ಪೂಜಾರಿ ಅವರಿಗೆ ಕರೊನಾ ಸೋಂಕು ತಗುಲಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜನಾರ್ದನ ಪೂಜಾರಿಯವರನ್ನು ಶನಿವಾರ ಕೊವಿಡ್​-19 ತಪಾಸಣೆಗೆ ಒಳಪಡಿಸಲಾಗಿತ್ತು. ವರದಿ ಪಾಸಿಟಿವ್​ ಬಂದಿದೆ. ಆದರೆ ತೀವ್ರವಾದ ಯಾವುದೇ ಲಕ್ಷಣಗಳು ಇಲ್ಲ. ಆದರೆ ಮುಂಜಾಗ್ರತಾ ಕ್ರಮವಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರ ಪುತ್ರ ಸಂತೋಷ್​ ಜೆ.ಪೂಜಾರಿ ತಿಳಿಸಿದ್ದಾರೆ.

ಜನಾರ್ದನ ಪೂಜಾರಿ ಆರೋಗ್ಯದ ಬಗ್ಗೆ ಯಾರೂ ಆತಂಕ ಪಡಬೇಡಿ. ಶೀಘ್ರದಲ್ಲೇ ಗುಣಮುಖರಾಗಲಿದ್ದಾರೆ. ಚಿಕಿತ್ಸೆ ನಡೆಯುತ್ತಿದೆ ಎಂದು ಹೇಳಿದ್ದಾರೆ.