ಅರಕಲಗೂಡು: ಪಟ್ಟಣದಲ್ಲಿ ತಾಲೂಕು ಆಡಳಿತದ ವತಿಯಿಂದ ಹೃದಯಕ್ಕಾಗಿ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿತ್ತು.
ತಾಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿ, ಔಷಧಿ ವಿತರಣಾ ಸಂಘದ ಸಹಯೋಗದಲ್ಲಿ ನಡೆದ ಜಾಥಾಕ್ಕೆ ಅನಕೃ ವೃತ್ತದಲ್ಲಿ ಚಾಲನೆ ನೀಡಿದ ಶಾಸಕ ಎ. ಮಂಜು ಮಾತನಾಡಿ, ಆರೋಗ್ಯಕ್ಕೆ ಎಲ್ಲರೂ ಜೀವನ ಶೈಲಿ ಬದಲಾಯಿಸಿಕೊಳ್ಳಬೇಕು. ನಮ್ಮ ಆರೋಗ್ಯ ಚೆನ್ನಾಗಿದ್ದರೆ ಮಾತ್ರ ನಮ್ಮ ಸಂಸಾರ ಆರೋಗ್ಯಕರವಾಗಿಟ್ಟುಕೊಳ್ಳಲು ಸಾಧ್ಯ. ಹೃದಯದ ಸಮಸ್ಯೆ ಕಾಣಿಸಿಕೊಂಡರೆ ಕೂಡಲೇ ವೈದ್ಯರ ಬಳಿ ತೆರಳಿ ತಪಾಸಣೆಗೆ ಒಳಪಡಬೇಕು. ಪ್ರತಿನಿತ್ಯ ವಾಕ್ ಮಾಡುವುದನ್ನು ಮರೆಯಬಾರದು ಎಂದರು. ತಹಸೀಲ್ದಾರ್ ಕೆ.ಸಿ. ಸೌಮ್ಯ, ಗ್ರೇಡ್- 2 ತಹಸೀಲ್ದಾರ್ ಸಿ. ಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಪಿ. ನಾರಾಯಣ, ಪಪಂ ಅಧ್ಯಕ್ಷ ಪ್ರದೀಪ್ ಕುಮಾರ್, ಉಪಾಧ್ಯಕ್ಷ ಸುಭಾನ ಷರೀಫ್, ತಾಲೂಕು ಆರೋಗ್ಯಾಧಿಕಾರಿ ಡಾ. ಪುಷ್ಪಲತಾ ಇತರರು ಕಾಲ್ನಡಿಗೆ ಜಾಥಾದಲ್ಲಿ ಪಾಲ್ಗೊಂಡಿದ್ದರು.