Jawaan movie collection in India: ಲಿವುಡ್ ಅಂಗಳದಲ್ಲಿ ಭಾರೀ ಸದ್ದು ಮಾಡುತ್ತಿರುವ ಕಿಂಗ್ ಖಾನ್, ಶಾರುಖ್ ಖಾನ್ ನಟನೆಯ ‘ಜವಾನ್’ ಚಿತ್ರ, ಜಾಗತಿಕ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಕಲೆಕ್ಷನ್ ಮಾಡುವ ಮೂಲಕ ಸಿನಿಪ್ರಿಯರಿಂದ ಉತ್ತಮ ರೆಸ್ಪಾನ್ಸ್ ಪಡೆದಿದೆ.
ಸಿನಿಮಾದಲ್ಲಿ ಶಾರುಖ್ ಖಾನ್ ಅವರು ಆ್ಯಕ್ಷನ್ ಹೀರೋ ಆಗಿ ಅಭಿಮಾನಿಗಳನ್ನು ರಂಜಿಸಿದ್ದಾರೆ. ಅವರ ಮಾಡಿರುವ ದ್ವಿಪಾತ್ರಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆ ಸಿಕ್ಕಿದೆ. ಅವರ ಜೊತೆ ನಟಿಸಿರುವ ದೀಪಿಕಾ ಪಡುಕೋಣೆ, ವಿಜಯ್ ಸೇತುಪತಿ, ನಯನತಾರಾ, ಸಾನ್ಯಾ ಮಲ್ಹೋತ್ರಾ, ಪ್ರಿಯಾಮಣಿ ಮುಂತಾದವರ ಪಾತ್ರಗಳು ಕೂಡ ಹೈಲೈಟ್ ಆಗಿವೆ.
7 ದಿನದಲ್ಲಿ ಭಾರತದ ಮಾರುಕಟ್ಟೆಯಲ್ಲಿ ಈ ಸಿನಿಮಾಗೆ ಬರೋಬ್ಬರಿ 386 ಕೋಟಿ ರೂಪಾಯಿ ಗಳಿಕೆ ಆಗಿದೆ. ಇದರಿಂದ ಶಾರುಖ್ ಖಾನ್ ಮುಖದಲ್ಲಿ ನಗು ಮೂಡಿದೆ. ಇನ್ನು ನಿರ್ದೇಶಕ ಅಟ್ಲಿ ಅವರಿಗೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬೇಡಿಕೆ ಹೆಚ್ಚಾಗಿದೆ.
ದೀಪಿಕಾ ಪಡುಕೋಣೆ, ವಿಜಯ್ ಸೇತುಪತಿ, ನಯನತಾರಾ, ಸಾನ್ಯಾ ಮಲ್ಹೋತ್ರಾ, ಪ್ರಿಯಾಮಣಿ ಮುಂತಾದವರ ಪಾತ್ರಗಳು ಕೂಡ ಹೈಲೈಟ್ ಆಗಿವೆ. ಹಿಂದಿ ಪ್ರೇಕ್ಷಕರಿಗೆ ಈ ಸಿನಿಮಾ ತುಂಬ ಇಷ್ಟ ಆಗಿದೆ. ಮೊದಲ ದಿನ ಭರ್ಜರಿ ಓಪನಿಂಗ್ ಪಡೆದುಕೊಂಡ ‘ಜವಾನ್’ ಸಿನಿಮಾ ನೂರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡುತ್ತಿದೆ.
ಸೆ.28ರಂದು ‘ದಿ ವ್ಯಾಕ್ಸಿನ್ ವಾರ್’, ‘ಚಂದ್ರಮುಖಿ 2’ ಮುಂತಾದ ಸಿನಿಮಾಗಳು ಬಿಡುಗಡೆ ಆಗಲಿವೆ. ಆ ಚಿತ್ರಗಳಿಗೆ ‘ಜವಾನ್’ ಪೈಪೋಟಿ ನೀಡಬೇಕಿದೆ.
ಭಾರತದ ಕಲೆಕ್ಷನ್ 368 ಕೋಟಿ ಆದ್ರೆ, ವಿಶ್ವಾದ್ಯಂತ 7 ದಿನದಲ್ಲಿ ಈ ಸಿನಿಮಾದ ಕಲೆಕ್ಷನ್ 650 ಕೋಟಿ ರೂಪಾಯಿ ದಾಟಿದೆ. ಶೀಘ್ರದಲ್ಲೇ ಈ ಚಿತ್ರ ಸಾವಿರ ಕೋಟಿ ರೂಪಾಯಿ ಗಳಿಸಲಿದೆ.