ರಾಯಚೂರು: ಜಮೀನಿನಲ್ಲಿ ಮಲಗಿದ್ದ ಮೂವರ ಮೇಲೆ ಜೆಸಿಬಿ ಹರಿದು ಸಾವನ್ನಪ್ಪಿರುವ ಘಟನೆ ಜಲ್ಲೆಯ ದೇವದುರ್ಗ ತಾಲೂಕಿನ ನಿಲವಂಜಿ ಗ್ರಾಮದ ಬಳಿ ನಡೆದಿದೆ.
ಛತ್ತೀಸ್ಗಢ ಮೂಲದವರಾದ ವಿಷ್ಣು(26), ಶಿವರಾಮ್(28), ಬಲರಾಮ್(30) ಮೃತ ದುರ್ದೈವಿಗಳು. ಜೆಸಿಬಿ ಹರಿದು ಈ ಮೂವರ ಸಾವನ್ನಪ್ಪಿದ್ದಾರೆ. ಈ ಕುರಿತು ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಲವಂಜಿಯಲ್ಲಿ ಮಂಗಳವಾರ ರಾತ್ರಿ, ಜಮೀನಿನಲ್ಲಿ ಬೋರ್‌ವೆಲ್ ಕೊರೆದು ಕಾಲುದಾರಿಯಲ್ಲಿಯೇ ರಾತ್ರಿ ಮೂವರು ಮಲಗಿದ್ದರು. ಈ ವೇಳೆ ಕಾಲುದಾರಿಯಲ್ಲಿ ಬಂದ ಜೆಸಿಬಿ, ಮೂವರು ಮೇಲೂ ಹರಿದು ಸ್ಥಳದಲ್ಲೇ ಧಾರುಣ ಅಂತ್ಯ ಕಂಡಿದ್ದಾರೆ.