ನ್ಯೂಸ್

ಪರೀಕ್ಷೆ ಬರೆಯುತ್ತಿದ್ದಾಗ ಕಾಣಿಸಿಕೊಂಡ ಹೆರಿಗೆ ನೋವು; ಆಸ್ಪತ್ರೆಗೆ ದಾಖಲಾಗಿ ಮಗುವಿಗೆ ಜನ್ಮ ನೀಡಿದ ಪಿಸಿ ಪರೀಕ್ಷಾರ್ಥಿ

ಉತ್ತರಪ್ರದೇಶ: ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆಗೆ ಆಗಮಿಸಿದ ಪರೀಕ್ಷಾರ್ಥಿ  ಪರೀಕ್ಷೆಯ ನಡುವೆಯೇ ಹೊಟ್ಟೆನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದು, ಸ್ವಲ್ಪ ಹೊತ್ತಿನಲ್ಲೇ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದೆ.

ತುಂಬು ಗರ್ಭಿಣಿ ಸುನೀತಾ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ ಬರೆಯುವುದಕ್ಕಾಗಿ ಮಹರ್ಷಿ ದಯಾನಂದ ಮಿಷನ್ ಇಂಟರ್ ಕಾಲೇಜಿಗೆ  ಆಗಮಿಸಿದ್ದರು.  10 ಗಂಟೆಗೆ ಪರೀಕ್ಷೆಗೆ ಹಾಜರಾದ ಅವರಿಗೆ 11.30ರ ಸುಮಾರಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ.

ಶಾಲೆಯ ಮ್ಯಾನೇಜರ್ ಪ್ರಭಾತ್ ಶುಕ್ಲಾ ಅವರ ಕಾರಿನಲ್ಲಿ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಳುಹಿಸಿದ್ದಾರೆ. ಬಳಿಕ ಸುನೀತಾ ಅವರಿಗೆ ಸಾಮಾನ್ಯ ಹೆರಿಗೆಯಾಗಿದೆ. ತಾಯಿ ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಡಾ. ಶಿಪ್ರಾ ಝಾ ಹೇಳಿದ್ದಾರೆ.